Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮದುರ್ಗ: ಅತಿಥಿ ಉಪನ್ಯಾಸಕರ ನೈಜತೆ ವರದಿಗೆ ಕಾಲೇಜು ಶಿಕ್ಷಣ ಇಲಾಖೆಯೇ ಹಣವನ್ನು ಭರಿಸಬೇಕು ಎಂದು ಒತ್ತಾಯಿಸಿ ಪಟ್ಟಣದ ಶ್ರೀಮತಿ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರಾಚಾರ್ಯ ಡಾ| ಎಂ.ಡಿ. ಕಮತಗಿ ಅವರ ಮೂಲಕ ಬೆಂಗಳೂರಿನ ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ| ರಾಜು ಕಂಬಾರ, ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೬ ನೇ ಸಾಲಿನಲ್ಲಿ ಆಯ್ಕೆಗೊಂಡ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತಾಲಯವೇ ಹಣವನ್ನು ಭರಿಸಬೇಕು. ಈಗಾಗಲೇ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿಯನ್ನು ತರಿಸಿಕೊಳ್ಳಲು ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಚಾರ್ಯರಿಗೆ ಆಯುಕ್ತರು ತಿಳಿಸಿದ್ದು, ಆಯುಕ್ತರ ಆದೇಶದಂತೆ ಎಲ್ಲಾ ಕಾಲೇಜುಗಳ ಪ್ರಾಚಾರ್ಯರು ಅತಿಥಿ ಉಪನ್ಯಾಸಕರ ಶೈಕ್ಷಣಿಕ ಪ್ರಮಾಣ ಪತ್ರಗಳ ನೈಜತೆ ವರದಿಯನ್ನು ನಮ್ಮಿಂದಲೇ ಹಣವನ್ನು ಭರಿಸಬೇಕೆಂದು ಹೇಳುತ್ತಿದ್ದಾರೆ ಎಂದರು.
ಕಳೆದ ೨-೩ ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ಉದ್ಯೋಗವಿಲ್ಲದೆ ಜೀವನವನ್ನು ನಿರ್ವಹಿಸುವುದೇ ಕಷ್ಟವಾಗಿದೆ. ತಂದೆ-ತಾಯಿಗಳ ಪಾಲನೆಯೊಂದಿಗೆ, ಮಕ್ಕಳಿಗೆ ಶಿಕ್ಷಣ ಕಲಿಸುವುದು ತುಂಬಾ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಪ್ರಮಾಣ ಪತ್ರಗಳ ನೈಜತೆ ವರದಿಗೆ ವಿಶ್ವವಿದ್ಯಾಲಯಗಳಿಗೆ ಹಣವನ್ನು ಭರಿಸಲು ಸಾಧ್ಯವಾಗುವುದಿಲ್ಲ. ನಮ್ಮ ಪ್ರಮಾಣ ಪತ್ರಗಳ ನೈಜತೆ ವರದಿಗೆ ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆಯೇ ಶುಲ್ಕವನ್ನು ಭರಿಸಬೇಕೆಂದು ಒತ್ತಾಯಿಸಿದ ಅವರು, ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳ ನೈಜತೆ ವರದಿ ವಿಳಂಬವಾಗಿದೆ ಎಂಬ ಕಾರಣವೊಡ್ಡಿ ನಮ್ಮ ಅಕ್ಟೋಬರ್ ತಿಂಗಳ ಗೌರಧನವನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬಾರದು. ಮೊದಲೇ ನಾವು ಆರ್ಥಿಕ ಸಂಕಷ್ಟದಲ್ಲಿ ಇದ್ದೇವೆ. ಒಂದು ವೇಳೆ ನಮ್ಮ ಗೌರವಧನ ತಡೆ ಹಿಡಿದರೆ, ರಾಜ್ಯಾದ್ಯಂತ ಎಲ್ಲಾ ಅತಿಥಿ ಉಪನ್ಯಾಸಕರು ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಮನವಿ ಮೂಲಕ ಆಗ್ರಹಿಸಿ ನೈಜತೆ ವರದಿಗೆ ತಾವೇ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರ ಹಣವನ್ನು ಭರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಾದ ಯಲ್ಲಪ್ಪ ಕುರಿ, ವಿ.ಎಸ್. ಲಕ್ಕನಗೌಡ್ರ, ಎಸ್.ಜಿ. ಚುಳಕಿ, ಎಂ.ಎ. ನಕಾರ್ಚಿ, ರಮೇಶ್ ಹತ್ತಿ, ಡಾ. ವೈ.ಎಸ್. ಹೊಸಮನಿ, ಪರಶುರಾಮ ಮುಕಾರಿ, ಐ.ಆರ್. ಜಕಾತಿ, ಸಂಜು ಶೆಟ್ಟರ್, ವಸಂತ ಅರಳೇಶ್ವರ್, ವಿಜಯ ಶೆಟ್ಟಿ, ಮಾರುತಿ ಸುಳಿಕೇರಿ, ಸೋಮೇಶ್ ಹೊಸಪೇಟಿ, ಸಂತೋಷ ಬ್ಯಾಡಗಿ, ಕೆ.ಎಸ್. ಕಂಬಾರ, ಎಂ.ಎಸ್. ಭಾರಾಗನಿ, ಮಂಜುಳಾ ಬದಾಮಿ, ಡಾ. ಮಹಾಲಕ್ಷ್ಮಿ ಭೂಶಿ, ಮಾಲಾ ಹಾಲೋಳ್ಳಿ, ಕವಿತಾ ರಂಗನ್ನವರ, ಶೋಭಾ ಹಾಲೋಳ್ಳಿ, ಎಸ್.ಜಿ. ಕಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ