Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ 

ಬೆಂಗಳೂರು, ನವೆಂಬರ್ 15: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಕರಾವಳಿಯಲ್ಲೂ ಸಧ್ಯಕ್ಕೆ ವರುಣಾರ್ಭಟ ನಿಂತಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ