Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಕೌಶಲ್ಯ ತರಬೇತಿ ಸದುಪಯೋಗಪಡಿಸಿಕೊಳ್ಳಿ : ಪಟ್ಟಣ

ರಾಮದುರ್ಗ: ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗೆ ಹಾಗೂ ಉದ್ಯೋಗ ನೀಡಲು ಕಂಕಣ ಬದ್ಧವಾಗಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪಟ್ಟಣದ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನದಡಿ ಐ.ಬಿ.ಪಿ.ಎಸ್, ಎಸ್.ಬಿ.ಐ ಮತ್ತು ಇನ್ನಿತರ ಬ್ಯಾಂಕ್‌ಗಳ ೧೨೦ ಗಂಟೆಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್-ಟಿವಿ ಬಳಕೆಯನ್ನು ತ್ಯಜಿಸಿ, ಹೆಚ್ಚಿನ ಸಮಯವನ್ನು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ಪ್ರೊ| ಆರ್.ಎಸ್. ಜಿರಂಕಳಿ ಮಾತನಾಡಿ, ವಿವಿಧ ಬ್ಯಾಂಕಗಳ ಆಶ್ರಯದಲ್ಲಿ ನಡೆಯುತ್ತಿರುವ ಯುವಜನರ ಉದ್ಯೋಗ ಕೌಶಲ್ಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕೆಂದರು.
ಪ್ರಾಚಾರ್ಯ ಡಾ. ಎಂ.ಡಿ. ಕಮತಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿ.ಎಂ.ಉಷಾ ಸಂಯೋಜಕ ಡಾ. ಎ.ಬಿ. ವಗ್ಗರ, ಡಾ. ಎಂ.ಆರ್. ದೊಡಮನಿ, ಡಾ. ಎ.ಸಿ. ಹುಲ್ಲೊಳ್ಳಿ, ಪವನಕುಮಾರ ಮಹೇಂದ್ರಕರ್, ಎಂ.ಎ. ನಕಾರ್ಚಿ, ಮಾರುತಿ ಸೂಳಿಕೇರಿ ಸೇರಿದಂತೆ ಕಾಲೇಜಿನ ಸಿ.ಡಿ.ಸಿ. ಕಮೀಟಿಯ ಸರ್ವಸದಸ್ಯರು, ಎಲ್ಲ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*