Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes


 ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಭವ್ಯ ಮೆರವಣಿಗೆ ರೇ.ಚ.ರೇವಡಿಗಾರ (ವಿಜಯಪುರ ರಸ್ತೆ) ಯ ಮಾರ್ಗವಾಗಿ ಸಾಗಿ, ಸಂಗೋಳ್ಳಿ ರಾಯಣ್ಣ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ.ಬಿ.ಆರ್.ವೃತ್ತದವರೆಗೆ ಸಾಗಿ ಬಸವ ಮಂಟಪ ತಲುಪಿತು.

ಬಳಿಕ ಸಿಂದಗಿ ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ್ ಕೇರಪ್ಪ ಬೆಳ್ಳಿ ಉದ್ಘಾಟಿಸಿದರು.

ಸಿಂದಗಿ ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ಸಂವಿಧಾನವು ರಾಷ್ಟ್ರಕ್ಕೆ ಅರ್ಪಣೆಗೊಂಡಿರುತ್ತದೆ. ಯುವ ಸಮುದಾಯ ಭಾರತದ ಸಂವಿಧಾನ ಪೀಠಿಕೆಯನ್ನು ಓದಬೇಕು. ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು ಎಂದರು.

ಈ ವೇಳೆ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕ ಎನ್.ಬಿ.ಪೂಜಾರಿ ಉಪನ್ಯಾಸ ನೀಡಿದರು. ಈ ವೇಳೆ ಪುರಸಭೆ ನಾಮ ನಿರ್ದೇಶಿತ ಸದಸ್ಯ ಸಾಯಬಣ್ಣ ಪುರದಾಳ, ದಸಂಸ ಮುಖಂಡ ರಾಕೇಶ ಕಾಂಬಳೆ, ಅಶೋಕ ಅಲ್ಲಾಪುರ ಮಾತನಾಡಿದರು.

ಈ ವೇಳೆ ತಹಶೀಲ್ದಾರ ಕೆ.ಎಸ್.ಬೆಳ್ಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ತಾಪಂ ಇಒ ರಾಮು ಅಗ್ನಿ, ಪಿಎಸ್‌ಐ ಆರೀಫ್ ಮುಷಾಪುರಿ, ರಾಜಶೇಖರ ಕೂಚಬಾಳ, ಮಲ್ಲಣ್ಣ ಸಾಲಿ, ಅಶೋಕ ಅಲ್ಲಾಪುರ, ಸಿದ್ದಪ್ಪ ಕಾರಿಮುಂಗಿ, ಪೀರೂ ಕೆರೂರ, ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಇದ್ದರು.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*