Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಸಿ ವಿತರಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ ಸಮಾಜ ಸೇವಕ ಆನಂದ ಟೋಣಪಿ.

ಅಥಣಿ : ಹುಟ್ಟು ಹಬ್ಬದ ಸಂದರ್ಭದಲ್ಲಿ ಯಾರು ದುಂದು ವೆಚ್ಚ ಮಾಡಬಾರದು ಎಂಬ ಸದುದ್ದೇಶವನ್ನು ಇಟ್ಟುಕೊಂಡು ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಸಮಾಜ ಸೇವಕ ಆನಂದ ಟೋಣಪಿ ಅವರು ಹುಟ್ಟು ಹಬ್ಬದ ನಿಮಿತ್ತವಾಗಿ ಪ್ರತಿ ಮನೆಗೂ ಸಸಿಗಳನ್ನು ವಿತರಿಸುವ ಮೂಲಕ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ವಿಶಿಷ್ಟ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಲಾಯಿತು


ಈ ವೇಳೆ ಸಸಿಗಳನ್ನು ವಿತರಿಸಿ ಸಮಾಜ ಸೇವಕ ಆನಂದ ಟೋಣಪಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು. ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ಮನೆಗೊಂದು ಮರ ನೀಡುವ ಮೂಲಕ ಇಂದು ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಲು ಸಹಕರಿಸಿದ ಎಲ್ಲ ನನ್ನ ಆತ್ಮೀಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ಎಂದ ಅವರು ಮುಂದಿನ ಪೀಳಿಗೆಗೆ ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಹುಟ್ಟು ಹಬ್ಬ ನೆನಪಿನಲ್ಲಿ ಸಸಿಗಳನ್ನು ವಿತರಿಸಬೇಕು‌. ಪರಿಸರ ಸ್ನೇಹಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕು ಎಂದರು

 ಆನಂತರ ಕಾರ್ಯನಿರತ ಪತ್ರಕರ್ತರ ಸಂಘದ ಅಥಣಿ ತಾಲೂಕಾ ಅಧ್ಯಕ್ಷ ರಾಕೇಶ ಮೈಗೊರ. ಮಾತನಾಡಿ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸಮಾಜಸೇವೆಯನ್ನೆ ತ‌ನ್ನ ಧ್ಯೇಯ ಮಾಡಿಕೊಂಡಿರುವ ಆನಂದ ಟೋಣಪಿ ಇವರು ಸಾಕಷ್ಟು ಬಡ ಕುಟುಂಬಗಳಿಗೆ ಸಹಾಯ ಸಹಕಾರ ಮಾಡುತ್ತಾ ಹಾಗೂ ಶಿಕ್ಷಣದಿಂದ ಯಾರು ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಇಂದು ತಮ್ಮ ಹುಟ್ಟು ಹಬ್ಬದಂದು ಪ್ರತಿ ಮನೆಗೆ ಸಸಿ ವಿತರಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಕಾಶ ಅಂಬೇಡ್ಕರ್ ಬ್ರೀಗೆಡ್ ತಾಲೂಕಾ ಅಧ್ಯಕ್ಷ ಮಹಾಂತೇಶ ಬಾಡಗಿ ಮಾತನಾಡಿ ಆನಂದ ಟೋಣಪಿ ಇವರ ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿಯಾಗಿದೆ. ತಮ್ಮ ಹುಟ್ಟು ಹಬ್ಬದಂದು ಪ್ರತಿ ಮನೆಗೆ ಸಸಿ ವಿತರಿಸಿದ್ದು ನೋಡಿದರೆ ಪರಿಸರದ ಬಗ್ಗೆ ಅವರಿಗೆ ಇರುವ ಕಾಳಜಿ ಎತ್ತಿ ತೋರಿಸುತ್ತದೆ. ಅವರ ಈ ಮಾದರಿ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು

ಈ ಸಂದರ್ಭದಲ್ಲಿ  ರಮೇಶ ಬಾದವಾಡಗಿ,ಅಜೀತ ಇನಾಮದಾರ,ಕಿರಣ ದೇಶಪಾಂಡೆ, ಸಂದೀಪ ಅಳತೇಕರ,ಶ್ರೀನಾಥ್ ದೇಶಪಾಂಡೆ, ದಿಗ್ವಿಜಯ ದೇಸಾಯಿ, ಪರಸರಾಮ ಕಾವೇರಿ,ಅಭಯ ಪಾಟೀಲ,ಸಂತೋಷ ಲಠೆ,ರಾಕೇಶ ಲಗೋಟಿ,ವಿನಾಯಕ ಮಡಿವಾಳ,ದಾನೇಶ ಪಾಟೀಲ, ಅನೀಲ ಕುಲರ್ಕಣಿ,ಸುಶಾಂತ ಬೋಜನಿ,ಸುಶಾಂತ್ ಪಟ್ಟಣ,

ರವಿ ಬಾಸಿಂಗಿ, ಬಸವರಾಜ ಕಾಂಬಳೆ, ಶ್ರೀನಿವಾಸ ಪಟ್ಟಣ,

ಸೇರಿದಂತೆ ಹಲವರು ಉಪಸ್ಥಿತರಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*