Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗಲು ಯುವ ಸಮೂಹ ಮುಂದೆ ಬರಬೇಕು : ಶ್ರೀಗಳು

ಇಂಡಿ: ಸಾಮೂಹಿಕ ವಿವಾಹಗಳಲ್ಲಿ ಮದುಯಾದರೆ ಆರ್ಥಿಕವಾಗಿ ಸದೃಢರಿರಲು ಸಾಧ್ಯವಾಗುತ್ತದೆ. ಹೀಗಾಗಿ ಈಗಿನ ಯುವ ಸಮೂಹ ಹೆಚ್ಚು ಹೆಚ್ಚಾಗಿ ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗಲು ಮುಂದೆ ಬರಬೇಕಿದೆ ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಹೇಳಿದರು.
ಅವರು ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶ್ರೀ ಅಲ್ಲಮಪ್ರಭು, ಹನುಮ ಜಯಂತಿ ಹಾಗೂ ಗೈಬುಸಾಬ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
‘ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವದಂಪತಿಗಳು ಕನಿಷ್ಠ  ನಾಲ್ಕು ಮಕ್ಕಳನ್ನು ಹೇರುವ ಶಪಥ ಮಾಡಬೇಕು. ನಿಮ್ಮ ಉದರದಿಂದ ಜನಿಸಿದ ಒಂದು ಮಗು ದೇಶ ಸೇವೆಗಾಗಿ, ಒಂದು ಮಗು ಧರ್ಮ ರಕ್ಷಣೆಗಾಗಿ, ಇನ್ನೊಂದು ಮಗು ಸಮಾಜದ ರಕ್ಷಣೆಗಾಗಿ ಮತ್ತೊಂದು ಮಗು ನಿಮ್ಮ ರಕ್ಷಣೆಗೆ ಹೀಗೆ ನಾಲ್ಕು ಮಕ್ಕಳನ್ನು ಹೆರಬೇಕು ಎಂದರು.
ಸಾನಿಧ್ಯ ವಹಿಸಿದ್ದ ಇಂಡಿ ಓಂಕಾರ ಆಶ್ರಮದ ಡಾ. ಸ್ವರೂಪಾನಂದ ಸ್ವಾಮೀಜಿ, ಆಳೂರ-ಚಳಕಾಪುರ ಸಿದ್ದಾರೂಢ ಆಶ್ರಮದ ಶಂಕರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಬಸವಂತರಾಯಗೌಡ ಪಾಟೀಲ ಮಾತನಾಡಿ, ಇಂಗಳಗಿ ಒಂದು ಚಿಕ್ಕ ಗ್ರಾಮವಾದರೂ ಸಹಿತ ಹಲವು ವ?ಗಳಿಂದ ಪ್ರತಿ ವ?ವೂ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಂಡು ಬಡ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಲ್ಲಮಪ್ರಭು ದೇವಸ್ಥಾನ ಕಮಿಟಿಯವರು ಕಾರ್ಯನಿರ್ವಹಿಸುತ್ತಿದ್ದು, ಅವರ ಈ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭು ಹೊಸಮನಿ ಮಾತನಾಡಿದರು,
ವೇದಿಕೆಯಲ್ಲಿ ಕಲ್ಲನಗೌಡ ಬಿರಾದಾರ, ವಜ್ರಕಾಂತ ಹೂಗಾರ, ಅಶೋಕ ಕುಲಕರ್ಣಿ, ಯಲ್ಲಪ್ಪ ಸಾತಲಗಾಂವ, ಅರ್ಜುನ ಜಾಧವ, ಗುರುಬಾಳ ಪೂಜಾರಿ, ಜಲದಪ್ಪ ಪೂಜಾರಿ, ಅಶೋಕ ಬಳಬಟ್ಟಿ, ಭೀಮು ರಾಠೋಡ ಇದ್ದರು.
ಜಾತ್ರಾ ಮಹೋತ್ಸವದಲ್ಲಿ ಅಣ್ಣಪ್ಪ ಅಹಿರಸಂಗ, ಸುಭಾಸ ಥೋರಾತ, ಬಸವರಾಜ ಜಾಧವ, ಉಮೇಶ ಬಳಬಟ್ಟಿ, ಭೀಮ ವಾಲೀಕಾರ, ಉಮೇಶ ಚವ್ಹಾಣ, ರಾಜು ಚಾಬುಕಸವಾರ, ಪ್ರಭು ಚಾಬುಕಸವಾರ, ಜಕ್ಕಪ್ಪ ಪೂಜಾರಿ, ಸದಾಶಿವ ಅಹಿರಸಂಗ, ವಿಷ್ಣು ವಾಘಮೋರೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ೭ ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ