Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆ ಒದಗಿಸಲು ದ್ವಿಭಾಷಾ ಮಾಧ್ಯಮ ಕಲಿಕೆ ಅತ್ಯಗತ್ಯ : ಸೈಯಿದಾ ಅನ್ನಿಸ್ ಮುಜಾವರ

ಇಂಡಿ: ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ, ಮಕ್ಕಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆ ಒದಗಿಸಲು ಕನ್ನಡದೊಂದಿಗೆ ಇಂಗ್ಲೀಷ್ ದ್ವಿಭಾಷಾ ಮಾಧ್ಯಮ ಕಲಿಕೆ ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನ್ನಿಸ್ ಮುಜಾವರ ಹೇಳಿದರು.
ಸೋಮವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ ೧-೫ ನೇ ವರ್ಗದ ಶಿಕ್ಷಕರ ದ್ವಿಭಾಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
೨೦೨೬-೨೭ನೇ ಸಾಲಿನಲ್ಲಿ, ೧-೫ನೇ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ಕನ್ನಡದ ಜತೆಗೆ ಇಂಗ್ಲಿಷ್ ಕಲಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಈ ದ್ವಿಭಾಷಾ ಮಾಧ್ಯಮವನ್ನು ಶಿಕ್ಷಕರು ಪರಿಣಾಮಕಾರಿಯನ್ನಾಗಿಸಬೇಕು ಎಂದರು.
ಡಯಟ್ ಉಪನ್ಯಾಸಕ ಶಿವಚಂದ್ರ ಕತ್ನಳ್ಳಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ೪೯೬೭ ಶಿಕ್ಷಕರಿಗೆ ಈ ದ್ವಿಭಾಷಾ ಮಾಧ್ಯಮ ತರಬೇತಿ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಳ ಮಾಡಿ, ಬಲವರ್ಧನೆಗಾಗಿ ದ್ವಿಭಾಷಾ ಮಾಧ್ಯಮ ಅಗತ್ಯ. ಈ ಪದ್ಧತಿಯ ಯಶಸ್ಸಿಗೆ ಶಿಕ್ಷಕರಲ್ಲಿ ಇಚ್ಛಾಶಕ್ತಿ ಅವಶ್ಯ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಮಾತನಾಡಿ, ಈ ದ್ವಿಭಾಷಾ ಮಾಧ್ಯಮವು ವಿಷಯದ ಪರಿಕಲ್ಪನೆಗಳನ್ನು ಮಾತೃಭಾಷೆಯಲ್ಲಿ ಅರ್ಥಮಾಡಿಕೊಂಡು, ಅದನ್ನು ಇಂಗ್ಲಿಷ್ನಲ್ಲಿ ಅಭಿವ್ಯಕ್ತಗೊಳಿಸುವುದರಿಂದ ಕಲಿಕೆ ಪರಿಣಾಮಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಹೇಳಿದರು.
ತರಬೇತಿ ನೋಡಲ್ ಅಧಿಕಾರಿ ಅಶೋಕ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ ಆರ್ ಪಿ ಗಳಾದ ಆಂಜನೇಯ ಸ್ವಾಮಿ ಹೊಸಮನಿ, ರಂಗರಾವ ಕುಲಕರ್ಣಿ, ಮುಖ್ಯೋಪಾಧ್ಯಾಯ ಬನಸೋಡೆ, ತಾಲೂಕ ಸಂಪನ್ಮೂಲ ವ್ಯಕ್ತಿಗಳಾಗಿ ಸಂತೋಷ ಬಂಡೆ, ದಾದಾ ಶ್ಯಾಮನವರ, ಎಸ್ ಎ ಮೊಮಿನ್, ಆರ್ ಎಸ್ ಸುರಗಿಹಳ್ಳಿ, ಜಟ್ಟಪ್ಪ ಮಾದರ, ಶಿವಾನಂದ ಡಬ್ಬಿಗಾರ, ಎಚ್ ಆರ್ ಪೂಜಾರಿ, ರಾಹುಲ ಭೀಮನಗರ, ಶಿವಲೀಲಾ ಹತ್ತಿ, ಸಂಜೀವ ಗುಡಿಮನಿ, ಕೆಂಪರಾಜು ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಹಾಗೂ ೧-೫ ನೇ ವರ್ಗ ಬೋಧಿಸುವ ೩೦೦ ಶಿಕ್ಷಕರು ಭಾಗವಹಿಸಿದ್ದರು.

 

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*