Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅನುಮಾನಾಸ್ಪದ ಸಾವು: ಸರ್ಕಾರ ಉನ್ನತ ತನಿಖೆಯ ಭರವಸೆ

ಚಾಮರಾಜನಗರ, ಜೂನ್ 27: ಚಾಮರಾಜನಗರ  ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು (Tiger) ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.









ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.


ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ. ಹೀಗಾಗಿ, ಸತ್ತ ಹಸುವಿಗೆ ಯಾರೋ ವಿಷ ಸಿಂಪಡಿಸಿರುವ ಸಾಧ್ಯತೆ ಇದೆ. ಅದನ್ನು ತಿಂದು ಹುಲಿ ಮತ್ತು ಹುಲಿ ಮರಿಗಳು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ