LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಶ್ಚಿಮ ಬಂಗಾಳದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 7 ಕಾರ್ಮಿಕರು ಸಾವು, ಹಲವರಿಗೆ ಗಾಯ

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ಖೈರಸೋಲ್‌ನಲ್ಲಿ ಖಾಸಗಿ ಒಡೆತನದ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಏಳು ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.


ಸ್ಫೋಟದ ಬಳಿಕ ಭೂಕುಸಿತ ಸಂಭವಿಸಿದೆ. ಹೀಗಾಗಿ, ಕೆಲವರು ಗಣಿಗಳಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಮೃತರಲ್ಲಿ ಹೆಚ್ಚಿನವರು ಆದಿವಾಸಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರಗೊಂಡಿದ್ದವು. ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಾಥಮಿಕ ಮಾಹಿತಿ ಪ್ರಕಾರ, ಕಲ್ಲಿದ್ದಲು ಉತ್ಖನನಕ್ಕೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು ಘಟನೆಗೆ ಕಾರಣ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್