ಗದಗ : ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು ನಂತರ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಎಸ್. ಬಿ. ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಕಾಲದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಹಾಗೂ ಭಾಷೆಗೆ ಸುಮಾರು 2500 ವರ್ಷಗಳ ಇತಿಹಾಸವಿದೆ 1973 ನವೆಂಬರ್ 1ರಿಂದ ಪ್ರತಿ ವರ್ಷದ ಪದ್ಧತಿಯಂತೆ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿರುವುದು ಬಹಳ ಸಂತೋಷದ ವಿಷಯ ಎಂದರು.
ನಂತರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್. ಬಿ. ಪಾಟೀಲ ರವರು ಮಾತನಾಡಿ, ಕನ್ನಡ ಭಾಷೆ ಬಹುಕಾಲದಿಂದಲೂ ವಿಶಿಷ್ಟ ಪೂರ್ಣವಾದ ಸ್ಥಾನಮಾನ ಹಾಗೂ ಗೌರವ ಪಡೆದುಕೊಂಡಿದೆ. ಇದುವರೆಗೂ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ನಮ್ಮ ಕನ್ನಡಿಗರ ಹೆಮ್ಮೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆರ್. ಪಿ. ಹಿರೇಮಠ ಪ್ರಾಥಮಿಕ ವಿಭಾಗದ ಮುಖ್ಯ ಮುಖ್ಯೋಪಾಧ್ಯಾಯರಾದ ಎಸ್. ಎಸ್. ಪುರಾಣಿಕಮಠ, ಕುಮಾರಿ ಆರ್. ವಿ. ಪಾಟೀಲ, ಶ್ರೀಮತಿ ಬಿ. ಎಸ್. ಅವಾರಿ, ಸಮೂಹ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು ನಂತರದಲ್ಲಿ ವಿದ್ಯಾರ್ಥಿಗಳಿಂದ ಭಾಷಣ ನೃತ್ಯ ಛದ್ಮವೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.