ಬೆಂಗಳೂರು, ಫೆಬ್ರವರಿ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ.
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.
ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಯಲ್ಲಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.