Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾ ಮಾರಿ ಪ್ರಕರಣ ದಾಖಲು

ಜಮಖಂಡಿ;ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿ ಕೊಂಡ ಘಟನೆ ಗುರುವಾರ ನಡೆದಿದೆ. ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ. ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪವನ ಸಾಳೋಂಕಿ ನಡುವೆ ಬುಧವಾರ ರಾತ್ರಿ ಕ್ಷುಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಗಲಾಟೆ ಜೋರಾಗಿ ಕೈ- ಕೈ ಮೀಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲಿಯೇ ಇದ್ದ ಮುಖಂಡರು ಇಬ್ಬರನ್ನು ಸಮಝಾಯಿಸಿ ಕಳುಹಿಸಿ ಕೊಟ್ಟಿದ್ದಾರೆ ಆದರೇ ಗುರುವಾರ ಬೆಳಿಗ್ಗೆಪವನ ಸಾಳೋಂಕಿ ಮನೆಗೆ ನುಗ್ಗಿದ ಸಂಗಮೇಶ ದಳವಾಯಿ ಕಡೆಯವರು ಮನೆಯಲ್ಲಿದ್ದ ಹೆಣ್ಣುಮಕ್ಕಳು ಮತ್ತು ಚಿಕ್ಕ ಚಿಕ್ಕ ಮಕ್ಕಳು ಎನ್ನದೆ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪವನ ಸಹೋದರ ಕಿರಣ ಸಾಳೋಂಕಿ ಆರೋಪಿಸಿದ್ದಾರೆ.

ಘಟನೆಯಿಂದ ಪಕ್ಕದ ನಿವಾಸಿಗಳು ಗಾಬರಿಗೊಂಡಿದ್ದು ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಪವನ ಸಾಳೋಂಕಿ ಸಹೋದರ ಇಬ್ಬರಿಗೆ ತಲೆಯ ಭಾಗಕ್ಕೆ ಹಾಗೂ ಒಬ್ಬನ ಎಡಗೈ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಗಮೇಶ ದಳವಾಯಿ ಕಡೆಯವರು ಸಾವಳಗಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಡೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಸ್ತಿನ ಪಕ್ಷ ಬಿಜೆಪಿಯ ಕಾರ್ಯಕರ್ತರು ಒಬ್ಬರಿಗೊಬ್ಬರು ಹೊಡೆದಾಡಿ ಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST