Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಕ್ಕೇರಿ ಮಠದೊಳಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿದ ಪ್ರಕರಣ

 ಹುಕ್ಕೇರಿ30 : ಪಟ್ಟಣದ ಹೊರವಲಯದ ಕ್ಯಾರಗುಡ್ಡ್ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ  ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ.


ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು 500 ಜನರ ಮೇಲೆ ಆಶ್ರಮ ಮಠದ ಮಲ್ಲೇಶ್ವರ ಮಹಾರಾಜರು ದೂರು ದಾಖಲಿಸಿದ್ದು ತನಿಖೆ ಮುಂದುವರೆದಿದೆ. ಇದೇ ವೇಳೆ ಕಲ್ಲೋಳಕರ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆAದೂ ಹೇಳಲಾಗಿದೆ.


ಇಲ್ಲಿನ ಅವುಜೀಕರ ಧ್ಯಾನ ಯೋಗಾಶ್ರಮದಲ್ಲಿ ಸೋಮವಾರ ಮಧ್ಯಾಹ್ನ 1ರ ಸುಮಾರಿಗೆ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತವರ ನೂರಾರು ಕಾರ್ಯಕರ್ತರು ಏಕಾಏಕಿಯಾಗಿ ನುಗ್ಗಿ ಧಾಂದಲೆ ನಡೆಸಿದಲ್ಲದೇ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಸ್ವಾಮೀಜಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.


ಪ್ರಮುಖ ಆರೋಪಿ ಕಲ್ಲೋಳಕರ ಮತ್ತು ಅವರ ಕಾರ್ಯಕರ್ತರು ಕಾನೂನು ಬಾಹಿರ ಸಭೆ ಸೇರಿರುವುದು, ಗಲಭೆಯಲ್ಲಿ ಭಾಗಿಯಾಗಿರುವುದು, ದೊಂಬಿಗೆ ಯತ್ನ, ಉದ್ದೇಶಪೂರ್ವಕವಾಗಿ ಗುಂಪುಗೂಡಿರುವುದು, ಸಾದಾ ಸ್ವರೂಪ ಗಾಯಪಡಿಸಿರುವುದು, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆಂದು  ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.


ಇಂಚಗೇರಿ ಸಂಪ್ರದಾಯದ ಅವುಜೀಕರ ಆಶ್ರಮದಲ್ಲಿ ಏಕಾಏಕಿ ನುಗ್ಗಿದ ಕಲ್ಲೋಳಕರ ಹಾಗೂ ಅವರ ಬೆಂಬಲಿತ ಕಾರ್ಯಕರ್ತರು ವಿಚಿತ್ರವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಗೂಂಡಾವರ್ತನೆ ತೋರಿದ ಚುನಾವಣಾ ಪ್ರಚಾರಾರ್ಥ ಕಾರ್ಯಕರ್ತರು ಆಶ್ರಮದ ಸ್ವಾಮೀಜಿಗಳ ಮೈಮೇಲೂ ಎರಗಿ ಆವಾಜ್ ಹಾಕಿದ್ದಾರೆ ಎಂದು ಹೇಳಲಾಗಿದೆ.


ಭಾರತೀಯ ದಂಡ ಸಂಹಿತೆ ಕಲಂ 143, 147, 323 ಸಹ ಕಲಂ 504, 149 ರ ಅನ್ವಯ ದೂರು ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಸಮಗ್ರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶ್ರೀಮಠದಲ್ಲಿ ನಡೆದಿರುವ ದಾಂಧಲೆ ದುಷ್ಕೃತ್ಯವನ್ನು ನಾಡಿನ ಅನೇಕ ಶ್ರೀಗಳು ಖಂಡಿಸಿ, ಧಾರ್ಮಿಕ ಪರಂಪರೆ ಅಪಮಾನಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ