Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಅವಘಡ; ಉಸಿರುಗಟ್ಟಿ ಓರ್ವ ಸಾವು

ಬೆಂಗಳೂರು, ಮೇ 9:

ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೋಟೆಲ್ ಒಳಗೆ ಸಿಲುಕಿದ್ದವರನ್ನು ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ದುರದೃಷ್ಟವಶಾತ್, ಅತಿಯಾದ ಹೊಗೆ ಸೇವನೆಯಿಂದ ಅಸ್ವಸ್ಥರಾಗಿದ್ದ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST