LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ ರಾಮ್‌ಗೆ ಆತ್ಮೀಯ ಬೀಳ್ಕೊಡುಗೆ

ಬಳ್ಳಾರಿ, 03: ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಾಸುದೇವ ರಾಮ್ ಎಂ. (ಕೆಎಸ್‌ಪಿಎಸ್) ಅವರಿಗೆ ನಗರದ ಅನಂತಪುರ ರಸ್ತೆಯ ಬಿಡಿಎ ಮೈದಾನದ ಫುಟ್‌ಬಾಲ್ ಹಾಲ್‌ನಲ್ಲಿ ಸೋಮವಾರ ಆತ್ಮೀಯ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಾಸುದೇವ ರಾಮ್ ಅವರ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಸರಳತೆ ಹಾಗೂ ಸೇವಾ ಬದ್ಧತೆಯನ್ನು ಶ್ಲಾಘಿಸಿದರು. ಸೇವಾವಧಿಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವುದರ ಜತೆಗೆ ಸಹೋದ್ಯೋಗಿಗಳು ಮತ್ತು ಸಿಬ್ಬಂದಿಯೊಂದಿಗೆ ಸ್ನೇಹಪೂರ್ವಕವಾಗಿ ನಡೆದುಕೊಂಡು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಸುದೇವ ರಾಮ್ ಅವರನ್ನು ಸನ್ಮಾನಿಸಿ, ನಿವೃತ್ತಿ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
ನಂತರ ಮಾತನಾಡಿದ ವಾಸುದೇವ ರಾಮ್, ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯ ಅನುಭವಗಳನ್ನು ಸ್ಮರಿಸಿದ ಅವರು, ಎಲ್ಲರ ಸಹಕಾರ ಮತ್ತು ಆತ್ಮೀಯತೆಯನ್ನು ಜೀವನದುದ್ದಕ್ಕೂ ಮರೆಯುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ