Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ವೈ.ಎಂ.ಇ.ಸಿ.ಯಲ್ಲಿ ವಿಜೃಂಭಣೆಯಿಂದ ನಡೆದ ಪದವಿ ಪ್ರದಾನ ಸಮಾರಂಭ 

ಬಳ್ಳಾರಿ, ಜೂನ್ 23: ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯ (ಆರ್.ವೈ.ಎಂ.ಇ.ಸಿ.)ದಲ್ಲಿ "ಪದವಿ ಪ್ರದಾನ ಸಮಾರಂಭ-2026" ಶನಿವಾರ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆಎಸ್‌ಡಬ್ಲ್ಯೂ ಸ್ಟೀಲ್ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷ ಹಾಗೂ ಸಿ&ಇಎಸ್ ವಿಭಾಗದ ಮುಖ್ಯಸ್ಥ ಮನೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯ ಸಂಗತಿ. ತಂತ್ರಜ್ಞಾನವು ಸಮಾಜಕ್ಕೆ ಅನೇಕ ಹೊಸ ಆವಿಷ್ಕಾರಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆಗಳಿಗೆ ಕಾರಣವಾಗಲಿದೆ. ಯುವ ಇಂಜಿನಿಯರ್‌ಗಳು ಬುದ್ಧಿವಂತಿಕೆ, ನಿರಂತರ ಕಲಿಕೆ, ಸುಸಂಸ್ಕೃತಿ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವೀ.ವಿ.ಸಂಘದ ಉಪಾಧ್ಯಕ್ಷರು ಹಾಗೂ ಆರ್.ವೈ.ಎಂ.ಇ.ಸಿ. ಆಡಳಿತ ಮಂಡಳಿಯ ಅಧ್ಯಕ್ಷರಾದ ಜಾನೇಕುಂಟೆ ಬಸವರಾಜ ಮಾತನಾಡಿ, ವಿದ್ಯಾರ್ಥಿ ಜೀವನದ ನಂತರ ವೃತ್ತಿಪರ ಜೀವನದ ಹೊಸ ಹಂತ ಆರಂಭವಾಗುತ್ತಿದ್ದು, ಯುವ ಇಂಜಿನಿಯರ್‌ಗಳು ತಾಂತ್ರಿಕ ಜ್ಞಾನದ ಜೊತೆಗೆ ಸಮಯಪ್ರಜ್ಞೆ, ಸಂವಹನ ಕೌಶಲ್ಯ ಹಾಗೂ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದೇಶಗಳಲ್ಲಿ ಉದ್ಯೋಗ ನಿರ್ವಹಿಸಿದರೂ ದೇಶಾಭಿಮಾನವನ್ನು ಉಳಿಸಿಕೊಳ್ಳಬೇಕು ಎಂದರು.
 ಕಾರ್ಯಕ್ರಮದಲ್ಲಿ ವೀ.ವಿ.ಸಂಘದ ಸಹ ಕಾರ್ಯದರ್ಶಿ ಯಾಳ್ಪಿ ಮೇಟಿ ಪಂಪನಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಕೋರಿ ವಿರುಪಾಕ್ಷಪ್ಪ, ಪ್ರಾಂಶುಪಾಲ ಡಾ. ಹೆಚ್. ಮಹಾಬಲೇಶ್ವರ, ಡೀನ್ (ಪರೀಕ್ಷಾ ವಿಭಾಗ) ಡಾ. ಬಿ. ಶ್ರೀಪತಿ, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ