LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಜ್ಯೋತಿಕುಮಾರ ಪಾಟೀಲ ನೇತೃತ್ವದಲ್ಲಿ ಅದ್ಧೂರಿ ಕಾರ್ಯಕ್ರಮ

ಕಾಗವಾಡದಲ್ಲಿ ಭವ್ಯ ದಹಿ ಹಂಡಿ ಉತ್ಸವ


ಕಾಗವಾಡ: ಕಾಗವಾಡ ತಾಲೂಕಿನಲ್ಲಿಯೇ ಪ್ರಥಮ ಬಾರಿಗೆ ಭವ್ಯ ಹಾಗೂ ದಿವ್ಯವಾಗಿ ಆಯೋಜಿಸಲಾಗಿದ್ದ ದಹಿ ಹಂಡಿ ಉತ್ಸವವು ಸೆ.7ರಂದು ಪಟ್ಟಣ ಪಂಚಾಯಿತಿ ಎದುರು ನಿರ್ಮಿಸಲಾಗಿದ್ದ ಭವ್ಯ ವೇದಿಕೆಯಲ್ಲಿ ಅದ್ಧೂರಿಯಾಗಿ ನಡೆಯಿತು.
ಜ್ಯೋತಿಕುಮಾರ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಪುಷ್ಪಹಾರ ಅರ್ಪಿಸಿ ಉದ್ಘಾಟಿಸಿದರು. ಬಳಿಕ ಅವರು ಶ್ರೀಕೃಷ್ಣನ ಭಕ್ತಿಗೀತೆಯನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.
ದಹಿ ಹಂಡಿ ಸ್ಪರ್ಧೆಯಲ್ಲಿ ವಿವಿಧ ತಂಡಗಳು ಉತ್ಸಾಹದಿಂದ ಭಾಗವಹಿಸಿದ್ದು, ರೋಚಕ ಪೈಪೋಟಿಯ ಬಳಿಕ ಜೈ ಮಹಾರಾಷ್ಟ್ರ ತಂಡವು ವಿಜೇತ ತಂಡವಾಗಿ ಹೊರಹೊಮ್ಮಿತು. ಯುವಕರ ಸಾಹಸಮಯ ಪ್ರದರ್ಶನಕ್ಕೆ ನೆರೆದಿದ್ದ ಸಾವಿರಾರು ಜನರು ಹರ್ಷೋದ್ಗಾರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪಿಎಸ್‌ಐ ರಾಘವೇಂದ್ರ ಖೋತ,ಕಾಕಾಸಾಬ ಪಾಟೀಲ, ಅರುಣ ಫರಾಂಡೆ , ಓಂಪ್ರಕಾಶ ಪಾಟೀಲ ,ಪೂಜಾ ಕಾಂಬಳೆ, ಮಲ್ಲಿಕಾರ್ಜುನ ಕಾಂಬಳೆ,ಬಾಳಾಸಾಬ ಕಲ್ಲೋಳೆ, ಜನಾರ್ಧನ್ ಧೋಡಾರೆ, ವಿದ್ಯಾಧರ ಧೋಡಾರೆ, ಶಿವರಾಜ ಪಾಟೀಲ ವಿನಾಯಕ ಚೌಗಲೆ,,ಸೇರಿದಂತೆ ಕಾಗವಾಡ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಭಾಗವಹಿಸಿದ್ದರು.
ಸಾರ್ವಜನಿಕರ ಹೆಚ್ಚಿನ ಸಂಖ್ಯೆಯ ಉಪಸ್ಥಿತಿಯಿಂದ ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಗವಾಡ ಪೊಲೀಸ್ ಠಾಣೆಯ ಸಿಬ್ಬಂದಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ