Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಗೆ ಭರ್ಜರಿ ಸಾಧನೆ

ಬಳ್ಳಾರಿ, ಮೇ 16:.: ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ “ಸೆಷನ್–4 ಸೂಪರ್ ಗೋಲ್ಡ್ ಕರಾಟೆ ಲೀಗ್” ಅಂತರಾಷ್ಟ್ರೀಯ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿ ವಿದ್ಯಾರ್ಥಿಗಳು ಕಾಟಾ ಹಾಗೂ ಕುಮಿತೆ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಗೆದ್ದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಮೇ 9 ಮತ್ತು 10ರಂದು ನಡೆದ ಸ್ಪರ್ಧೆಯಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ತೇಜೇಶ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಮಣಿಚರಣ್ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಧುಸೂದನ್ ರೆಡ್ಡಿ ಕಾಟಾ ಹಾಗೂ ಕುಮಿತೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಮಹೇಂದ್ರ ಪ್ರಸಾದ್ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಟಿ.ಎಸ್. ಸಾಯಿ ತೇಜ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭುವನ್ ತೇಜ್ ಎಚ್ ಮತ್ತು ಚಾರಿಕಾ ಇಬ್ಬರೂ ಕಾಟಾ ಹಾಗೂ ಕುಮಿತೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕೃತಿಕಾ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರೆ, ನಿರ್ಭಾಯಿ ಎಚ್. ನಾಯ್ಡು ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಶಾನ್ವಿ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಬಿನಾಶ್ ಪಾಲ್ ಕಾಟಾ ಮತ್ತು ಕುಮಿತೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಹರ್ಷವರ್ಧನ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಯಿ ಜ್ಯೋತಿ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ನಿಖಿಲ್ ಕ್ರಿಶ್ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದರೆ, ದೇವಾಂಶ್ ಯೆಲ್ಲಾ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಗೌತಮ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ತೇಜೇಶ್ ವಿ.ಪಿ ಕಾಟಾದಲ್ಲಿ ದ್ವಿತೀಯ ಮತ್ತು ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಕಟ್ಟೇಸ್ವಾಮಿ ಅಭಿನಂದನೆ ಸಲ್ಲಿಸಿದರು. ತರಬೇತುದಾರರಾದ ಹುಲುಗಣ್ಣ, ಪ್ರಸಾದ್ ಜಡೇಶ್, ಹನುಮಂತ ಹಾಗೂ ತಾಂತ್ರಿಕ ನಿರ್ದೇಶಕರಾದ ಸುಭಾಷ್ ಮುತ್ಕೂರ್ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ