LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು

ಹಸಿರು ಕ್ರಾಂತಿ ವರದಿ ನವದೆಹಲಿ

ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹‎1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ. ‎ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿಗೆ ಹೆಚ್ಚೆಚ್ಚು ರೈಲ್ವೆ ಯೋಜನೆಗಳ ಕೊಡುಗೆ ನೀಡುತ್ತಲೇ ಬಂದಿದೆ. ಇದಕ್ಕಾಗಿ ಪ್ರಧಾನಿ ಅವರಿಗೆ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ವಿ.ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್