ಕಾಗವಾಡ : ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಂಡು ತಮ್ಮ ಜೀವನದ ಗುರಿಯನ್ನು ತಲುಪಬೇಕೆಂದು ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ.ಬಿ.ಎ.ಪಾಟೀಲ ಅಭಿಪ್ರಾಯಿಸಿದರು. ಅವರು ಸ್ಥಳೀಯ ಶಿವಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಕತ್ವದಲ್ಲಿ ಗ್ರಂಥಾಲಯ ವಿಭಾಗ ಆಯೋಜಿಸಿದ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮುಂದುವರೆದು ಅವರು ತರಗತಿಗಳ ಜ್ಞಾನ ವಿದ್ಯಾರ್ಥಿಗಳಲ್ಲಿ ಆಳವಾಗಿ ಬೆಳೆಯಬೇಕಾದರೆ ಗ್ರಂಥಾಲಯದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಜ್ಞಾನಾರ್ಜನೆಗಾಗಿ ಗ್ರಂಥಾಲಯದ ಪುಸ್ತಕಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಎಸ್.ಪಿ.ತಳವಾರ ಅವರು ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಯಲ್ಲಿ ಗ್ರಂಥಾಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಗ್ರಂಥಾಲಯವನ್ನು ಕೇವಲ ಪುಸ್ತಕಗಳನ್ನು ತೆಗೆದುಕೊಂಡು ಹೋಗುವ ಸ್ಥಳವೆಂದು ಪರಿಗಣಿಸದೆ ಜ್ಞಾನ, ಸಂಶೋಧನೆ, ಚಿಂತನೆ ಮತ್ತು ಸೃಜನಶೀಲತೆಯ ಕೇಂದ್ರವಾಗಿ ಬಳಸಿಕೊಳ್ಳಬೇಕೆಂದು ಪ್ರೊ.ಜೆ.ಕೆ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯ ಮೇಲೆ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಮೇಜರ್ ವಿ.ಎಸ್.ತುಗಶೆಟ್ಟಿ ಐಕ್ಯೂಎಸಿ ಸಂಯೋಜಕರಾದ ಪ್ರೊ.ಬಿ.ಡಿ.ಧಾಮಣ್ಣವರ, ಮಹಾವಿದ್ಯಾಲಯದ ಗ್ರಂಥಪಾಲಕರಾದ ಪಿ.ಎಂ.ದೊಡಮನಿ, ಶಿವಾನಂದ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಪಿ.ಬಿ.ನಂದಾಳೆ, ಶಿವಾನಂದ ಆಂಗ್ಲ ಮಾಧ್ಯಮದ ಮುಖ್ಯೋಪಾಧ್ಯಾಯರಾದ ಶಾಂತಿನಾಥ ಪಂಢರಾಪೂರೆ ಉಪಸ್ಥಿತರಿದ್ದರು.
ಆರಂಭದಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಕಾರ್ಯಧ್ಯಕ್ಷರಾದ ಡಾ.ಎ.ಟಿ.ಪಾಟೀಲ ಸ್ವಾಗತಿಸಿದರು. ಪ್ರೊ.ಮಿಸ್.ಎಸ್.ಎಸ್.ಕಾಂಬಳೆ ನಿರೂಪಿಸಿದರು. ಪ್ರೊ.ಎ.ಎ.ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಶಿವಾನಂದ ಮಹಾವಿದ್ಯಾಲಯದ ಪದವಿ, ಪದವಿ ಪೂರ್ವ ಮತ್ತು ಶಿವಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಿಬ್ಬಂದಿ ಹಾಜರಿದ್ದರು.