ಹೊಸಪೇಟೆ: ಹೊಸಪೇಟೆ ಹೊರವಲಯದಲ್ಲಿ ರೈಲ್ವೇ ಹಳಿ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬಳ್ಳಾರಿ ಮೂಲದ ಮನ್ಸೂರ್ (40) ಎಂದು ಗುರುತಿಸಲಾಗಿದೆ. ಹೊಸಪೇಟೆ ರೈಲ್ವೇ ಪೊಲೀಸ್ ಉಪ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.