Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಸಿ ರಾಜೇಶ್ ಹೆಚ್.ಡಿ

ಪೂರ್ವಭಾವಿ ಸಭೆಯಲ್ಲಿ ನಿರ್ಧಾರ



ಬಳ್ಳಾರಿ,ಏ.23
ಜಿಲ್ಲಾ ಕೇಂದ್ರದಲ್ಲಿ ಬರುವ ಮೇ 01 ರಂದು ಭಗವಾನ್ ಬುದ್ಧ ಜಯಂತಿ ಹಾಗೂ ಮೇ 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಹೇಳಿದರು.
ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಠಾಚಾರದನ್ವಯ ಆಚರಿಸಬೇಕಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಮೇ 01 ರಂದು ಭಗವಾನ್ ಬುದ್ಧ ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಂಗA ವೃತ್ತದ ಮಾರ್ಗವಾಗಿ ಸಾಂಸ್ಕೃತಿಕ ಹೊಂಗಿರಣ ಸಭಾಂಗಣದವರೆಗೆ ನಡೆಯಲಿದೆ. ಬಳಿಕ 06 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ಬಾರಿ ಮೇ 01 ರಂದು ಅಂತರರಾಷ್ಟಿçÃಯ ಕಾರ್ಮಿಕ ದಿನವೂ ಆಗಿರುವುದರಿಂದ, ರಜೆ ಇರುತ್ತದೆ. ಹಾಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅದೇರೀತಿಯಾಗಿ ಮೇ 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ನಗರದ ಬಸವ ಭವನದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಂದು ಸಂಜೆ 05 ಗಂಟೆಗೆ ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಬಳಿಕ ಸಂಜೆ 06.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ಜಯAತಿ ಮೆರವಣಿಗೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನು ನಿಯೋಜಿಸಲಾಗುವುದು. ಮೆರವಣಿಗೆಯ ಹಾದಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬ್ಯಾನರ್ ಅಳವಡಿಕೆ ಕುರಿತಂತೆ ಮಹಾನಗರ ಪಾಲಿಕೆ ವತಿಯಿಂದ ಕಡ್ಡಾಯ ಅನುಮತಿ ಪಡೆಯಬೇಕು. ಮಹನೀಯರ ಶಾಂತಿ ತತ್ವಗಳ ಕುರಿತು ನುರಿತರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
ಬುದ್ಧ ಜಯಂತಿಯAದು ಸರ್ಕಾರಿ ವಸತಿ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಶಿಬಿರ ಆಯೋಜಿಸಬೇಕು ಎಂದು ಮುಖಂಡರೊಬ್ಬರು ಸಭೆಯಲ್ಲಿ ಪ್ರಸ್ತಾಪಿಸಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಕುರಿತಂತೆ ತಮ್ಮ ಸಲಹೆ-ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ತೋಟಗಾರಿಕೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST