LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಮೂಲದ‌ ಉಗ್ರ

ವಿಜಯಪುರ, ನವೆಂಬರ್ 1: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ‌ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ ವಿಜಯಪುರ  ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ಸಿಬ್ಬಂದಿ ಶೋಧ ನಡೆಸಿದ್ದಾಗ ಮಹತ್ವದ ದಾಖಲೆಗಳು ಸಿಕ್ಕ ಬಗ್ಗೆ ಇದೀಗ ಮಾಹಿತಿ ಹೊರಬಿದ್ದಿದೆ. ಇದೇ 2025 ರ ಜುಲೈ 9 ರಂದು ವಿಜಯಪುರ ನಗರದಲ್ಲಿ ಟೈಲರ್ ರಾಜಾನನ್ನು ತಮಿಳುನಾಡಿನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು. ವಿಜಯಪುರದ ಇಬ್ರಾಹಿಂ ರೋಜಾ ಏರಿಯಾದಲ್ಲಿ ಉಗ್ರ ವಾಸವಿದ್ದ ಮನೆಯನ್ನು ತಮಿಳುನಾಡಿನ ಉಗ್ರ ನಿಗ್ರಹ ಪಡೆ ಶೋಧ ನಡೆಸಿತ್ತು. ಆ ಸಂದರ್ಭದಲ್ಲಿ, ಉಗ್ರ ಬಳಸುತ್ತಿದ್ದ ನಕಲಿ ದಾಖಲೆಗಳನ್ನು ಪತ್ತೆ ಮಾಡಿರುವುದು ಇದೀಗ ಬಯಲಾಗಿದೆ.

ಉಗ್ರನ ಮನೆಯಲ್ಲಿ ಶೋಧ ನಡೆಸಿದ್ದ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳಕ್ಕೆ ನಕಲಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಗ್ಯಾಸ್ ಬುಕ್, ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿ 1998 ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ಆರೋಪಿ. ಅಂದು ಸಂಭವಿಸಿದ್ದ ಬಾಂಬ್ ಸ್ಫೋಟಗಳಲ್ಲಿ 58 ಜನರು ಸಾವನ್ನಪ್ಪಿ, 250 ಜನ ಗಾಯಗೊಂಡಿದ್ದರು. ಆ ನಂತರ ತಲೆ ಮರೆಸಿಕೊಂಡು ಹಲವು ರಾಜ್ಯಗಳಲ್ಲಿ ರಾಜಾ ಸಿದ್ಧಿಕಿ ಓಡಾಡಿದ್ದ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಟೈಲರಿಂಗ್ ಕಲಿತು, ಅಲ್ಲಿ ಬೇರೆ ಹೆಸರಿನಲ್ಲಿ ಹಲವು ವರ್ಷ ಕೆಲಸ ಮಾಡಿದ್ದ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್