LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಧೈರ್ಯಂ ಧರ್ಮಂ ದೇಶಂ  ಪ್ರಜಾ ಕರ್ತವ್ಯ ಹೇಳುವ ಸಿನಿಮಾ 



        ಹೊಸಬರೇ ಸೇರಿ ಸಿದ್ದಪಡಿಸಿರುವ

'ಧೈರ್ಯಂ ಧರ್ಮಂ ದೇಶಂ'

 DDD ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.

      ಆರಂಭದಲ್ಲಿ ಸಗಟು ತರಕಾರಿ ವ್ಯಾಪಾರ ಮಾಡುತ್ತಿರುವ ಕೆ.ಬಿ.ಮಂಜುನಾಥ್ ಸಿನಿಮಾಕ್ಕೆ ಕಥೆ,ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರು.

       ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಇಲ್ಲಿಯವರೆಗೆ ಎರಡು ಕಿರುಚಿತ್ರಗಳನ್ನು ಮಾಡಿದ್ದೇನೆ. ಇದು ನನಗೆ ಮೊದಲ ಹಿರಿತೆರೆಯ ಅನುಭವ. ಸಾಮಾನ್ಯ ಪ್ರಜೆಯಾದವನು ಧೈರ್ಯ ಮಾಡಬೇಕು. ಅಧಿಕಾರಿಗಳು ಧರ್ಮವನ್ನು ಕಾಪಾಡಬೇಕು. ಯೋಧನಾದವನು ದೇಶವನ್ನು ಕಾಪಾಡಬೇಕು. ಇವುಗಳು ಸಮಾಜದ ಮೂರು ಅಂಗಗಳಾಗಿದೆ. ಅದಕ್ಕಾಗಿ ’DDD’ ಎಂದು ಶೀರ್ಷಿಕೆ ಇಡಲಾಗಿದೆ. ನಾವುಗಳು ಸಮಾಜವನ್ನು ಹೇಗೆ ನೋಡಿಕೊಳ್ಳಬೇಕು. ಅವಘಡಗಳು ಆದಾಗ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದನ್ನು ಹೇಳಲಾಗಿದೆ. ಮಾನವಿಯತೆ, ಪ್ರೀತಿ, ಸಂಬಂಧಗಳ ಬೆಲೆ ಇನ್ನು ಮುಂತಾದವನ್ನು ಐದು ಹಾಡುಗಳಲ್ಲಿ ತೋರಿಸಲಾಗಿದೆ. ಇದು ಸಾರ್ವತ್ರಿಕ ವಿಷಯವಾಗಿರುವುದರಿಂದ ಐದು ಭಾಗಗಳಿಗೆ ಈಗಾಗಲೇ ಚಿತ್ರಕಥೆ ಸಿದ್ದಪಡಿಸಿದ್ದೇನೆ. ಮೊದಲನೆ ಭಾಗ ಇದಾಗಿರುತ್ತದೆ. ಮಾಧ್ಯಮದ ಸಹಕಾರ ಬೇಕು" ಎಂದು ಕೋರಿದರು.

      ಅರುಣ್‌ವೆಂಕಟರಾಜು ನಾಯಕನಾಗಿ ಎರಡನೇ ಅವಕಾಶ. ಶಿವಮೊಗ್ಗದ ಗಗನಮಲ್ನಾಡ್ ನಾಯಕಿ. ಇನ್ಸ್‌ಪೆಕ್ಟರ್ ಆಗಿ ರಘುಶಿವಮೊಗ್ಗ, ಉಳಿದಂತೆ ಚಾರ್ಲ್ಸ್ ಟೋನಿ, ಸುರೇಶ್‌ಬಾಬು,  ಡಿವಿ.ನಾಗರಾಜು, ಸುರೇಶ್‌ಬಾಬು, ರೋಹಿಣಿ ಮುಂತಾದವರು ಅಭಿನಯಿಸಿದ್ದಾರೆ.

       ಬಹದ್ದೂರ್ ಚೇತನ್‌ಕುಮಾರ್, ಗಜೇಂದ್ರ, ಸಂಜಯ್ ಮತ್ತು ಲಕ್ಷಿದಿನೇಶ್ ಸಾಹಿತ್ಯದ ಐದು ಗೀತೆಗಳಿಗೆ ಸೂರಜ್‌ಜೋಯಿಸ್ ಸಂಗೀತ ಸಂಯೋಜಿಸಿದ್ದಾರೆ.  ಛಾಯಾಗ್ರಹಣ ಎಸ್.ಕೆ.ಮಸ್ತಾನ್ ಷರೀಫ್, ಸಂಕಲನ ಧನುಷ್.ಎಲ್.ಬೇಡಿ. ಬೆಂಗಳೂರು, ಮಂಗಳೂರು, ಕೊಳ್ಳೆಗಾಲ ಗಡಿಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.

      ಸಚಿತ್ ಫಿಲಿಂಸ್‌ನ ವೆಂಕಟ್‌ಗೌಡ ಸಾರಥ್ಯದಲ್ಲಿ ನವೆಂಬರ್ ತಿಂಗಳಲ್ಲಿ ಸುಮಾರು 40 ಕೇಂದ್ರಗಳಲ್ಲಿ ಸಿನಿಮಾವು ತೆರೆ ಕಾಣಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್