Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಕಾಲುವೆ ಮತ್ತು ಹಳ್ಳಗಳಿಗೆ ಸುಮಾರು ೬ ಟಿಎಂಸಿ ನೀರು ಹರಿಸುವಂತೆ ಮನವಿ"

ಮೂಡಲಗಿ : ಬರಗಾಲದ ಛಾಯೆಗೆ ಒಳಗಾಗಿರುವ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಲ್ಲಿ ಮನವಿ ಮಾಡಿಕೊಂಡರು.
ಗುರುವಾರದಂದು ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಅಶೋಕ ಖಂಡ್ರಟ್ಟಿ ಅಭಿಮಾನಿ ಬಳಗದವರು ನೀಡಿರುವ ಅದ್ದೂರಿಯಾದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ದನ- ಕರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆ, ಹಳ್ಳಕ್ಕೆ ನೀರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸಚಿವರಲ್ಲಿ ಕೋರಿದರು.
ಜೂನ್- ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿದೆ. ಇದರಿಂದ ಬರಗಾಲಕ್ಕೆ ತುತ್ತಾಗಿದ್ದೇವೆ. ಮಳೆಯಾಗದೇ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ ೧೪ ಟಿಎಂಸಿಯ? ನೀರು ಸಂಗ್ರಹವಿದ್ದು, ಜನ- ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಹಳ್ಳಗಳಿಗೆ ನೀರನ್ನು ಹರಿಸುವಂತೆ ಅವರು ಸಚಿವರನ್ನು ಆಗ್ರಹಿಸಿದರು. ಕಾಲುವೆಗಳು ಮತ್ತು ಹಳ್ಳಗಳಿಗೆ ಸುಮಾರು ೬ ಟಿಎಂಸಿಯ? ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಿದರೆ ಸಾರ್ವಜನಿಕರು - ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ದುರದುಂಡಿ ಗ್ರಾಮದ ಅಶೋಕ ಖಂಡ್ರಟ್ಟಿಯವರು ಕಳೆದ ೯ ವ?ಗಳಿಂದ ಹಿಡಕಲ್ ಡ್ಯಾಂ ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷರಾಗಿ ಉತ್ತಮವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ನೀರು ಬಳಕೆದಾರರ ಶೃಂಗ ಮಹಾಮಂಡಳಿಯ ನಿರ್ದೇಶಕ ಸ್ಥಾನವನ್ನು ನೀಡಲಾಗಿದೆ. ಈ ಮೂಲಕ ಭಗೀರಥ- ಉಪ್ಪಾರ ಸಮಾಜಕ್ಕೆ ಪ್ರಾಶಸ್ತ್ಯ ಕೊಟ್ಟಂತಾಗಿದೆ. ಖಂಡ್ರಟ್ಟಿಯವರ ಸೇವೆಯು ಇನ್ನು  ರಾಜ್ಯ ಮಟ್ಟದಲ್ಲಿ ವಿಸ್ತಾರವಾಗಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಅರಭಾವಿ ಕ್ಷೇತ್ರದ ಹಲವು ಮುಖಂಡರು, ಮಾಜಿ- ಹಾಲಿ ಚುನಾಯಿತ ಪ್ರತಿನಿಧಿಗಳು, ಸಹಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ