Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ, ಮೂರು ಜನ ಸಾವು

ಅಥಣಿ: ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿ ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಅಥಣಿ ಹೊರವಲಯದ ಬಣಜವಾಡ ಕಾಲೇಜ್ ಹತ್ತಿರ ಸಂಕೇಶ್ವರ ಜೇರ್ವಗಿ ರಾಷ್ಟ್ರೀಯ ಹೆದ್ದಾರಿ ರಾತ್ರಿ ಅಪಘಾತ ಸಂಭವಿಸಿದ, ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಥಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ಕು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಒಂದು ಬೃಹತ್ ಲಾರಿ , ಪಿಕಪ್ ವಾಹನ, ಎರ್ಟಿಗಾ , ಸ್ಕಾರ್ಪಿಯೋ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಆಧಿಕ್ಷಕರು ಶೃತಿ ಎನ್, ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ,

ಗಾಯಾಳುಗಳನ್ನು ರಕ್ಷಿಸಲು ಬಂದವರೇ ಅಪಘಾತದಲ್ಲಿ ಸಾವು! : ಕಾಗವಾಡ ಕಡೆಯಿಂದ ಕೆಂಪು ಇಟ್ಟಿಗೆ ತುಂಬಿಕೊಂಡು ಬೃಹತ್ ಲಾರಿಯಲ್ಲಿ ಅಥಣಿ ಕಡೆ ಬರುತ್ತಿರುವಾಗ ಅಥಣಿಯಿಂದ ಕಾಗವಾಡಕ್ಕೆ ತೆರುಲುತ್ತಿರುವ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ, ಎರಡೂ ವಾಹನಗಳು ರಸ್ತೆ ಪಕ್ಕದಲ್ಲಿ ನೆಲಕಚ್ಚಿ ಪಿಕಪ್ ವಾಹನದಲ್ಲಿ ಚಲಾಯಿಸುತ್ತಿದ್ದ ಚಾಲಕ ಮತ್ತು ಕ್ಲೀನರ್ ಸಹಾಯಕ್ಕಾಗಿ ಅಂಗಲಾಚುತ್ತಾರೆ, ಇದನ್ನನ್ನು ಗಮನಿಸಿದ ಸ್ಕಾರ್ಪಿಯೋ ವಾಹನ ಚಾಲಕ  ತನ್ನ ವಾಹನ ರಸ್ತೆ ಪಕ್ಕಕೆ ನಿಲ್ಲಿಸಿ  ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ ಕಾರು ನೇರವಾಗಿ ರಕ್ಷಿಸಲು ಮುಂದವನಿಗೆ ಹೊಡೆಯುತ್ತಿದ್ದಂತೆ ಸ್ಕಾರ್ಪಿಯ ವಾಹನ ಚಾಲಕ ಹಾಗೂ ಇನೋವಾದಲ್ಲಿ ಇಬ್ಬರೂ ಒಟ್ಟು ಮೂರು ಜನ ಸಾವು ಸಂಭವಿಸುತ್ತದೆ, ಮೊದಲು ಅಪಘಾತವಾಗಿರುವ ಟ್ರಕ್ ಹಾಗೂ ಪಿಕಪ್ ವಾಹನದ ಚಾಲಕ ಕ್ಲೀನರ್ ಗಾಯಾಳುಗಳಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.

ಯಾವ ರೀತಿ ಅಪಘಾತವಾಗಿದೆ ಎಂಬುದು ಅಥಣಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ತನಿಖೆಯಿಂದಷ್ಟೇ ಸಂಪೂರ್ಣ ಸತ್ಯಾಂಶ ಹೊರಬರಬೇಕಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ