ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಉಷ್ಣಾಂಶ ಸ್ವಲ್ಪ ಹೆಚ್ಚಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಉಷ್ಣಾಂಶದಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಎಷ್ಟು ಗರಿಷ್ಠ, ಕನಿಷ್ಠ ಉಷ್ಣಾಂಶವಿದೆ ಎಂಬುದನ್ನು ತಿಳಿಯೋಣ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 19-21 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಗದಗ, ಹಾವೇರಿಯಲ್ಲಿ 15-17 ಡಿಗ್ರಿ ಸೆಲ್ಸಿಯಸ್, ಬೀದರ್, ಕಲಬುರಗಿ, ಕೊಪ್ಪಳದಲ್ಲಿ 18-21 ಡಿಗ್ರಿ ಸೆಲ್ಸಿಯಸ್ ಇದೆ.
ದಕ್ಷಿಣ ಒಳನಾಡಿನ ಆಗುಂಬೆ, ಚಾಮರಾಜನಗರ, ಚಿಂತಾಮಣಿ, ಮಡಿಕೇರಿ ಮತ್ತು ಮೈಸೂರಿನಲ್ಲಿ 11-14 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ 15-17 ಡಿಗ್ರಿ ಸೆಲ್ಸಿಯಸ್ ಇದೆ.