ಬಳ್ಳಾರಿ, ಜೂ. 04: ಸಹಕಾರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ, ಸಹಕಾರ ಇಲಾಖೆ ಸಹಕಾರಿ ಸಂಘಗಳ ಉಪನಿಬಂಧಕರಾದ ಹಾಗೂ ಬಳ್ಳಾರಿ ಜಿಲ್ಲಾ ಉಪನಿಬಂಧಕರಾದ ಜಿ.ಎಂ. ವೀರಭದ್ರಯ್ಯ ಸ್ವಾಮಿ ಕೆಸಿಎಸ್ ಅವರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕೆ ಸರಬರಾಜು ಮತ್ತು ಮಾರಾಟ ಸಹಕಾರಿ ಸಂಘ ನಿಯಮಿತದ ವ್ಯವಸ್ಥಾಪಕರಾದ ಚಂದ್ರಪ್ಪ, ಸಂಘದ ನಿರ್ದೇಶಕರಾದ ಟಿ. ಕಿರಣ್ ಕುಮಾರ್, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಗುರುಸ್ವಾಮಿ ಸೇರಿದಂತೆ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.
ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಂಘಗಳ ಸುಸೂತ್ರ ನಿರ್ವಹಣೆಗೆ ಜಿ.ಎಂ. ವೀರಭದ್ರಸ್ವಾಮಿ ಅವರು ನೀಡುತ್ತಿರುವ ಮಾರ್ಗದರ್ಶನ ಮತ್ತು ಸೇವೆಯನ್ನು ಈ ವೇಳೆ ಗಣ್ಯರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಸಿಬ್ಬಂದಿ ಹಾಗೂ ಸಹಕಾರ ಕ್ಷೇತ್ರದ ಅನೇಕ ಮುಖಂಡರು ಭಾಗವಹಿಸಿದ್ದರು.
