LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ