Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಸಿ ಪಿ.ಪ್ರಮೋದ್



ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ

ಬಳ್ಳಾರಿ,ಆ.29 ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.
ನಗರದ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.
ಎಲ್ಲರೂ ಭಾಗವಹಿಸಿ ಆಚರಿಸಿದರೆ ಜಯಂತಿ ಕಾರ್ಯಕ್ರಮಗಳಿಗೆ ಮೆರಗು. ಹಾಗಾಗಿ ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವಿದ್ದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದ ಅವರು, ವೇದಿಕೆ ಮತ್ತು ಮೆರವಣಿಗೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸೆ.17 ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡಿರುತ್ತವೆ ಎಂದು ಅವರು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ಗಾಯನ, ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನಿತರ





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ