LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

8,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾವಿಧಿ ಸ್ವೀಕಾರ

ಬಳ್ಳಾರಿಯಲ್ಲಿ ನಶಾಮುಕ್ತ ಭಾರತ ಅಭಿಯಾನ


ಬಳ್ಳಾರಿ,ಆ.20: ಕೇಂದ್ರ ಸರ್ಕಾರದ ‘ನಶಾಮುಕ್ತ ಭಾರತ ಅಭಿಯಾನ' ಯೋಜನೆಯ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಮೈತ್ರಿ ವ್ಯಸನ ಮುಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ 6ನೇ ಮಾದಕ ದ್ರವ್ಯ ಸೇವನೆ ವಿರೋಧಿ ದಿನವನ್ನು ಮಂಗಳವಾರದAದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಜಾಗೃತಿ ಅಭಿಯಾನದ ಅಂಗವಾಗಿ ನಗರದ ವಿವಿಧ ಕಾಲೇಜುಗಳು ಮತ್ತು ಪ್ರೌಢಶಾಲೆಗಳಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸಿ, ಸಾಮೂಹಿಕ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ನಿರ್ವಹಣಾ ಕಾಲೇಜು, ಮೊಹಮ್ಮದಿಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜು, ವಾರ್ಡ್ಲಾ ಪದವಿ ಪೂರ್ವ ಕಾಲೇಜು, ಸೈಂಟ್ ಜೋಸೆಫ್ ಕಾಲೇಜು, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪದವಿ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜು ಸೇರಿದಂತೆ ನಗರದ ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 8,500ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಏಕಕಾಲದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಕಾಲೇಜಿನ ಪ್ರಾಚಾರ್ಯ ಡಾ. ರಾಮಕೃಷ್ಣ, ರಾಜೇಶ್ವರಿ ಪಾಟೀಲ್, ಮುಖಂಡರಾದ ಮೊಹಮ್ಮದ್ ಮುಜಾಮಿಲ್, ಡಿ.ಡಿ.ಆರ್.ಸಿ ನೋಡಲ್ ಅಧಿಕಾರಿ ನಾಗೇಂದ್ರ, ಜಿಲ್ಲಾ ಸಂಯೋಜಕ ಟೇಕರಾಜ್, ಎಂ.ಆರ್.ಡಬ್ಲೂö್ಯ ರಾಣಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವದನ್ನು ಅರಿಯಿರಿ  :ಡಾ. ಅಲ್ಲಮಪ್ರಭು ಶ್ರೀಗಳು ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಅಲಕಾನಂದ ಮಳಗಿ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ"ತೆರಿಗೆದಾರರಿಗೆ ಗೌರವ ನೀಡಿ, ಸಮಾಲೋಚಿಸಿ" ಬಳ್ಳಾರಿ: ಪೋಷಕರ ಪತ್ತೆಗಾಗಿ ಮೂಕ ಬಾಲಕನ ಪರವಾಗಿ ಮನವಿಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿದಿ. 27 ರಂದು "ಹೋರಾಟದ ನಡೆ ಶಾಸಕರ ಮನೆ ಕಡೆ"ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ