ಆಕಸ್ಮಿಕ ದಾಳಿ; 09 ಬಾಲ ಕಾರ್ಮಿಕರ ರಕ್ಷಣೆ
ಬಳ್ಳಾರಿ,ಜೂ.25
ನಗರದ ಅನಂತಪುರ ರಸ್ತೆ, ತಾಳೂರು ರಸ್ತೆ, ಸಿರುಗುಪ್ಪ ರಸ್ತೆಯ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳ ತಂಡವು ಮಂಗಳವಾರ ಆಕಸ್ಮಿಕ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದಾಗ 09 ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬAದಿದ್ದು, ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ಮಕ್ಕಳ ವಯಸ್ಸಿನ ದೃಢೀಕರಣ ದಾಖಲೆ ಹಾಗೂ ಮಾಲೀಕರ ದಾಖಲೆ ಪಡೆದು ಮಾಲೀಕರ ವಿರುದ್ಧ ಬಾಲ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.
ದಾಳಿ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ನರಸಪ್ಪ, ಮನ್ಸೂರ್ ಬಾಷಾ, ಪೋಲಿಸ್ ಇಲಾಖೆಯ ಗುರುಪ್ರಸಾದ್, ಶಂಕರಪ್ಪ ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ರೀಚ್ ಸಂಸ್ಥೆಯ ಸಂಯೋಜಿಕಿಯಾದ ಲಕ್ಷಿö್ಮÃದೇವಿ, ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.