ಬೆಂಗಳೂರು, ಜೂನ್ 09: ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ಪ್ರಕರಣ ಇಡೀ ಕರುನಾಡಿಗೆ ಸೂತಕ ತಂದಿದೆ. ಸದ್ಯ ಈ ಪ್ರಕರಣ ರಾಜಕೀಯ ನಾಯಕರ ಜಟಾಪಟಿಗೆ ಆಹಾರವಾಗಿದೆ. ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಿಚಿವ ಡಾ.ಪರಮೇಶ್ವರ್ ಹೊಣೆ ಎಂದು ವಿಪಕ್ಷಗಳು ಕಿಡಿಕಾರಿದ್ದವು. ಇದೇ ವೇಳೆ ಜಿ ಪರಮೇಶ್ವರ್, ಖಾತೆ ಬದಲಾಯಿಸಲು ಕೇಳಿದ್ದಾರೆ ಅನ್ನೋ ವದಂತಿ ಕೂಡ ಹಬ್ಬಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಿಚಿವರು, ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಖಾತೆ ಬದಲಾವಣೆಗೆ ಕೇಳಿದ್ದೇನೆ ಅನ್ನೋ ವಿಚಾರವನ್ನು ಹೇಳಿದ್ಯಾರು? ಏನೇ ಇದ್ದರೂ ನನ್ನನ್ನೇ ಕೇಳಬೇಕು ಅಲ್ಲವೇ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರುವುದಿಲ್ಲ. ಏನೇ ಇದ್ದರೂ ನನ್ನನ್ನೇ ಕೇಳಿ, ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.