Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿ ಖಾತಾಗೆ ಎ ಖಾತಾ ಮಾನ್ಯತೆ

* ಕಾಂಗ್ರೆಸ್​​ ಭವನಕ್ಕೆ ಜಮೀನು * ಸನ್ನಡತೆ ಆಧಾರದಲ್ಲಿ ಕೈದಿಗಳಿಗೆ ಬಿಡುಗಡೆ ಭಾಗ್ಯ


* ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ


 ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಮಾನ್ಯತೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿಸದರು.

ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುವುದು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ 'ಬಿ-ಖಾತಾ' ನಿವೇಶನ/ಕಟ್ಟಡ/ ಅಪಾರ್ಟ್‌ ಮೆಂಟ್/ ಫ್ಲಾಟ್ ಗಳಿಗೆ ಎ-ಖಾತಾ" ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು. ಇದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದೆ.

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ , ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣವೆಲ್ಲಿದೆ. ಶೇ.40% ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದರು.

ಶೀಘ್ರದಲ್ಲಿ ಪಂಚಾಯತ್ ಚುನಾವಣೆ
ಪಂಚಾಯತಿ ಚುನಾವಣೆಯನ್ನು ಆದಷ್ಟು ಶೀಘ್ರವಾಗಿ ನಡೆಸಲು ತೀರ್ಮಾನಿಸಿದೆ. ಹಲವಾರು ಪಂಚಾಯ್ತಿಗಳು ಸುಪ್ರೀಂ ಕೋರ್ಟಿಗೆ ಹೋಗುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದರು.

ಸಚಿವ ಸಂಪುಟ ಸಭೆಯ ತೀರ್ಮಾನಗಳು

  • KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿ

  • ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 TPD ಬಯೋ ಸಿಎನ್​ಜಿ ಘಟಕ ಸ್ಥಾಪನೆ

  • KKRDB ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ

  • KKRDB ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ

  • 127.40 ಕೋಟಿ ಅಂದಾಜು ಮೊತ್ತದಲ್ಲಿ PM-ABHIM ಯೋಜನೆಯಡಿ 2024-26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 SC-AAM (Rural Health and Wellness Centre) ಸ್ಥಾಪನೆ

  • 24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

  • 40 ಕೋಟಿ ರೂ. ಅಂದಾಜು ಮೊತ್ತದಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿ

  • ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ

  • ಚಾಮರಾಜನಗರ ಜಿಲ್ಲೆಯಲ್ಲಿ166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ

  • ಹಳಿಯಾಳ ಪಟ್ಟಣಕ್ಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

  • ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ

  • ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ

  • 11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ

  • ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ


ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸನ್ನಡತೆ ಆಧಾರದಲ್ಲಿ 33 ಕೈದಿಗಳಿಗೆ ಬಿಡುಗಡೆ ಭಾಗ್ಯ

ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ