LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಪಶ್ಚಿಮ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರ್ವಜ್ಞ ವಿದ್ಯಾಪೀಠ ವಿದ್ಯಾರ್ಥಿಗಳ ಸಾಧನೆ




ತಾಳಿಕೋಟೆ,    ತಾಳಿಕೋಟೆ ಪಶ್ಚಿಮ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ತಾಳಿಕೋಟೆಯ ಸರ್ವಜ್ಞ ವಿದ್ಯಾಪೀಠ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
      ಸೆ. ೪ರಂದು ಸರ್ವಜ್ಞ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಗಮನಾರ್ಹ ಫಲಿತಾಂಶ ದಾಖಲಿಸಿದ್ದಾರೆ.
ಪ್ರಥಮ ಸ್ಥಾನ ಪಡೆದ ಸ್ಪರ್ಧೆಗಳು:
    ಬಾಲಕರ ವಾಲಿಬಾಲ್, ಬಾಲಕಿಯರ ವಾಲಿಬಾಲ್, ಬಾಲಕಿಯರ ೪><೧೦೦ ಮೀಟರ್ ರಿಲೇ, ಬಾಲಕರ ೪><೧೦೦ ಮೀಟರ್ ರಿಲೇ ಹಾಗೂ ಬಾಲಕಿಯರ ಥ್ರೋಬಾಲ್ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ದ್ವಿತೀಯ ಸ್ಥಾನ ಪಡೆದ ಸ್ಪರ್ಧೆಗಳು:
  ಬಾಲಕರ ಥ್ರೋಬಾಲ್, ಬಾಲಕರ ಖೋ-ಖೋ, ಬಾಲಕಿಯರ ಖೋ-ಖೋ ಹಾಗೂ ಬಾಲಕಿಯರ ಥ್ರೋಬಾಲ್ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಗಳಿಸಿ ಗಮನ ಸೆಳೆದಿದ್ದಾರೆ. ಇದಲ್ಲದೆ, ಬಾಲಕರ ವೈಯಕ್ತಿಕ ವಿಭಾಗದಲ್ಲಿ ೧೦೦ ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಬಾಲಕಿಯರ ವೈಯಕ್ತಿಕ ವಿಭಾಗದ ೧೦೦ ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
     ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರು, ಮುಖ್ಯೋಪಾಧ್ಯಾಯರಾದ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಶಳ್ಳಗಿ ಹಾಗೂ ಶಾಂತಗೌಡ ಬಿರಾದಾರ ಸೇರಿದಂತೆ ಶಾಲೆಯ ಸಮಸ್ತ ಗುರುಬಳಗ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್*ಅ.12ರಂದು ಅದ್ಧೂರಿಯಾಗಿ ಅಥಣಿ ತಾಲೂಕಿನ  ನಾಗನೂರ ಪಿ.ಕೆ. ಸರ್ಕಾರಿ ಶಾಲೆಗೆ ಶತಮಾನೋತ್ಸವ ಸಂಭ್ರಮ : ಸಚಿವ ಸವದಿ ಅವರೊಂದಿಗೆ ಪೂರ್ವಭಾವಿ ಚರ್ಚೆಸಚಿವ  ಸತೀಶ ಜಾರಕಿಹೋಳಿ ವಿರುದ್ದ ವ್ಯವಸ್ಥಿತ ಷಡ್ಯಂತ್ರವಾಗಿದೆ : ಸುಜಾತಾ ಬೇಟೆಗಾರ.*ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಮುಖಂಡರು ಭಾಗಿ*ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ  : ವಿ.ಕೆ.ಬಸಪ್ಪ ಭೋವಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ | ಅ.11ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ನೆರವು: ಶಿವಸಂಜೀವಿನಿ ಸುರಗಿರಿ ವತಿಯಿಂದ ಸಹಾಯಧನ ವಿತರಣೆಸಿರುಗುಪ್ಪದಲ್ಲಿ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ: ಗಡಿನಾಡ ಕನ್ನಡಿಗರ ಸವಾಲು ಮತ್ತು ನಾಡು-ನುಡಿ ರಕ್ಷಣೆಗೆ ಕರೆಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ  ಭಾಜನರಾದ ನಬಿಸಾಬ ಕುದ್ದುನ್ನವರಗಣೇಶೋತ್ಸವದಲ್ಲಿ ಹಳೆ ಸಂಪ್ರದಾಯಕ್ಕೆ ಮರುಜೀವ ನೀಡಿ: ಪಿಎಸ್‌ಐ ಪ್ರೀತಮ್ ನಾಯಕ