Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ರಾಜೀವಗಾಂಧಿ ವಿಶ್ವವಿದ್ಯಾಲಯದ ಕ್ರೀಡಾಕೂಟ


ಬಾಗಲಕೋಟ- ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯಮಟ್ಟದ ಶೆಟಲ್ ಬ್ಯಾಡ್ಮಿಂಟನ್, ಚೆಸ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡೆಗಳಲ್ಲಿ ಸಾಧನೆತೋರಿ ಪ್ರಶಸ್ತಿ ಪಡೆದಿರುವರು.

ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಚೆಸ್ ಕ್ರೀಡೆಯಲ್ಲಿ ವಿದ್ಯಾರ್ಥಿಗಳ ತಂಡ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಮತ್ತು ವಿಜಯಪುರದ ಡಾ.ಬಿ.ಎನ್.ಎಮ್ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ದ್ವಿತೀಯ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುವರು. ಈ ಎಲ್ಲ ಕ್ರೀಡಾಕೂಟಗಳಲ್ಲಿ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ತಂಡದ ನೇತೃತ್ವವನ್ನು ದೈಹಿಕ ನಿರ್ದೇಶಕ ಡಾ.ವಿಜಯಕುಮಾರ ಹಿರೇಮಠ ಅವರು ವಹಿಸಿದ್ದರು.


ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರ ತಂಡಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ, ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿಗಳಾದ ಮಹೇಶ ಎನ್.ಅಥಣಿ,  ಬಿ.ವಿ.ವಿ.ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕರಾದ ಡಾ.ಶ್ರೀರಾಮ ಕೋರಾ ಮತ್ತು ಡಾ.ಸಂತೋಷ ಶೀಲವಂತ ಅಭಿನಂದಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ