Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ : ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ : ಉಳಿಪೆಟ್ಟು ಬಿದ್ದ ಕಲ್ಲು ಸುಂದರ ಮೂರ್ತರೂಪ ಪಡೆಯುವ ಹಾಗೆ, ಜೀವನದಲ್ಲಿ ಮನುಷ್ಯನಿಗೆ ಎದುರಾಗುವ ಅನೇಕ ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಸೋಮವಾರದಂದು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಗೋಕಾಕ ಇವರ ಆಶ್ರಯದಲ್ಲಿ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಕಾರ್ಯಾಗಾರ ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐಎಎಸ್, ಕೆಎಎಸ್ ಗಳಂತಹ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಮ್ಮ ಭಾಗದ ಬಡ ವಿದ್ಯಾರ್ಥಿಗಳಿಗೆ ಆನೂಕೂಲವಾಗಲೆಂದೇ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಮೂಡಲಗಿಯಲ್ಲಿ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರ ಎಂಬ ಉಚಿತ ಗ್ರಂಥಾಲಯ ತೆರೆದಿದ್ದು, ಸ್ಪರ್ಧಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಸಲಹೆ ನೀಡಿದರು.

ಅತಿಥಿಯಾಗಿ ಆಗಮಿಸಿದ್ದ ತಹಸೀಲ್ದಾರರಾದ ಶ್ರೀಶೈಲ ಗುಡುಮೆ ಮಾತನಾಡಿ, ಯೋಜನಾಬದ್ಧ ಜೀವನ, ನಿರಂತರ ಓದು ಹಾಗೂ ಧೃಢ ಸಂಕಲ್ಪದಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಬಹುದು. ಕೇಂದ್ರದ ರೈಲ್ವೇ, ಏರ್ ರ್ಫೋರ್ಸ್, ನೇವಿಗಳಂತಹ ಅವಕಾಶಗಳನ್ನು ಕೂಡ ಬಳಸಿಕೊಂಡು ಯಶಸ್ವಿ ಜೀವನ ಕಟ್ಟಿಕೊಳ್ಳಬಹುದಾಗಿದೆ ಎಂದು ಕಿವಿಮಾತು ಹೇಳಿದರು.

ಪ್ರಾಚಾರ್ಯರಾದ ಮಹೇಶ ಕಂಬಾರವರು ಮಾತನಾಡಿ ನಮ್ಮ ಹತ್ತಿರ ಎಷ್ಟು ಇದೆ ಅನ್ನುವುದು ಮುಖ್ಯವಲ್ಲ, ನಾವು ಬೇರೆಯವರಿಗೆ ಏನು ಕೊಟ್ಟಿದ್ದೇವೆ ಅನ್ನುವುದು ಬಹು ಮುಖ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಗಗನ ಕುಸುಮವಾಗಿದ್ದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಉಚಿತವಾಗಿ ಓದಲು ಗ್ರಂಥಾಲಯ ಅನುಕೂಲ ಮಾಡಿಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೋಳಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಾಂಚಜನ್ಯ ಸ್ಪರ್ಧಾತ್ಮಕ ಪರೀಕ್ಷಾ ಅಕಾಡೆಮಿ ಬೆಳಗಾವಿಯ ಮುಖ್ಯಸ್ಥರಾದ ಪ್ರವೀಣ ಮಗದುಮರವರು ಪರೀಕ್ಷಾರ್ಥಿಗಳಿಗೆ ಯಶಸ್ಸಿನ ಮಾರ್ಗೋಪಾಯ ಕಾರ್ಯಾಗಾರ ನಡೆಸಿಕೊಟ್ಟರು. ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರದ ಮೇಲ್ವಿಚಾರಕರಾದ ವಸಂತ ನಾಯಿಕವಾಡಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಮಹಾದೇವ ಶೇಕ್ಕಿ, ಮುಖಂಡರಾದ ಸಂತೋಷ್ ಸೋನವಾಲಕರ, ಅನ್ವರ್ ನದಾಫ್, ಹನಮಂತ ಗುಡ್ಲಮನಿ, ಪಾಂಡುರಂಗ ಮಹೇಂದ್ರಕರ, ಕೇದಾರಿ ಭಸ್ಮೆ, ಸಿದ್ದಣ್ಣಾ ದುರದುಂಡಿ, ರವೀಂದ್ರ ಸಣ್ಣಕ್ಕಿ, ಹುಸೇನ್ ಶೇಖ, ಬಸು ಝಂಡೇಕುರುಬರ, ಸೇರಿದಂತೆ ಅನೇಕ ಪರೀಕ್ಷಾರ್ಥಿಗಳು ಉಪಸ್ಥಿತರಿದ್ದರು. ಜಯಶ್ರೀ ಮದಿಹಳ್ಳಿ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ