Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ವೈದ್ಯರು ಮತ್ತು ನಕಲಿ ಕ್ಲಿನಿಕ್​ಗಳ ವಿರುದ್ಧ ಕಾರ್ಯಚರಣೆ

ಬೆಳಗಾವಿ: ಜಿಲ್ಲೆಯಲ್ಲಿ‌ ಮಕ್ಕಳ ಮಾರಾಟ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ನಕಲಿ ವೈದ್ಯರು ಮತ್ತು ನಕಲಿ ಕ್ಲಿನಿಕ್​ಗಳ ವಿರುದ್ಧ ಕಾರ್ಯಚರಣೆ ಕೈಗೊಂಡಿದೆ. ಡಿಎಚ್ಓ ಡಾ.ಮಹೇಶ್ ಕೋಣಿ ನೇತೃತ್ವದಲ್ಲಿ ನಕಲಿ ವೈದ್ಯನ ಕ್ಲಿನಿಕ್​ಗೆ ಬೀಗ ಜಡಿಯಲಾಗಿದೆ.


ನಗರದ ಬಡಕಲ್​ ಗಲ್ಲಿಯಲ್ಲಿರುವ ನಕಲಿ ವೈದ್ಯನ ಶಿವಾ ಹೆಸರಿನ ಕ್ಲಿನಿಕ್​ಗೆ​ ಬೀಗ ಹಾಕಲಾಗಿದೆ. ಕ್ಲಿನಿಕ್​ ಒಳಗಡೆ ಇಸಿಜಿ ಸೇರಿದಂತೆ ಆಯುರ್ವೇದ ಮೆಡಿಸಿನ್​ ಪೂರೈಸಲಾಗುತ್ತಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ಕ್ಲಿನಿಕ್​ನ್ನು ಜಾಲಾಡಿ ಮಾತ್ರೆ, ಔಷಧ, ಯಂತ್ರೋಪಕರಣಗಳ ಪಟ್ಟಿ ಮಾಡಿಕೊಂಡು ನಕಲಿ ವೈದ್ಯನಿಗೆ ನೋಟಿಸ್ ನೀಡಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.


ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಮಾತನಾಡಿ, 'ದಶಕಗಳಿಂದಲೂ ಇದೇ ಕಟ್ಟಡದಲ್ಲಿ ಅನಧಿಕೃತವಾಗಿ ಕ್ಲಿನಿಕ್​​ ನಡೆಸಲಾಗುತ್ತಿತ್ತು. ಇದರ ಪಕ್ಕದಲ್ಲೇ ಇದೇ ವ್ಯಕ್ತಿಗೆ ಸೇರಿದ ಇನ್ನೊಂದು ದೊಡ್ಡ ಆಸ್ಪತ್ರೆ ಕೂಡ ಇದೆ. ಅದೂ ಅನಧಿಕೃತ ಆಗಿರುವ ಸಂಶಯವಿದ್ದು, ನೋಟಿಸ್‌ ನೀಡಿ ಪರಿಶೀಲಿಸಲಾಗುವುದು. ಈಗ ಸೀಜ್​ ಮಾಡಿರುವ ಕ್ಲಿನಿಕ್‌ ತೆರೆಯಲು ನಿಯಮಾನುಸಾರ ಅನುಮತಿ ಪಡೆದಿಲ್ಲ. ರೋಗಿಗಳ ಚಿಕಿತ್ಸೆಗೆ ಸೂಕ್ತ ಸೌಕರ್ಯಗಳಿಲ್ಲ, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮಾಣಪತ್ರಗಳೂ ಇಲ್ಲ. ಪ್ರಮುಖವಾಗಿ ಕ್ಲಿನಿಕ್‌ನಲ್ಲಿ ನೇಮಕಗೊಂಡ ಸಿಬ್ಬಂದಿ ಕೂಡ ವೈದ್ಯಕೀಯಕ್ಕೆ ಸಂಬಂಧಿಸಿದ ಯಾವುದೇ ಶಿಕ್ಷಣ ಪಡೆದಿಲ್ಲ' ಎಂದು ತಿಳಿಸಿದರು.


ಅಲ್ಲದೇ, ದಾಳಿ ವೇಳೆ ಕ್ಲಿನಿಕ್‌ನಲ್ಲಿ ರೋಗಿಗಳನ್ನು ದಾಖಲು ಮಾಡಿಕೊಳ್ಳಲಾಗಿತ್ತು. ಕೂದಲು ಉದುರುವುದು, ನರ ದೌರ್ಬಲ್ಯ, ಸೌಂದರ್ಯ ವೃದ್ಧಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಉಪಚಾರ ಮಾಡಿದ ದಾಖಲೆಗಳು ಸಿಕ್ಕಿವೆ. ವಿವಿಧ ರೀತಿಯ ಔಷಧಿ, ಮಾತ್ರೆ, ಪೌಡರ್‌ಗಳನ್ನೂ ಇವರು ರೋಗಿಗಳಿಗೆ ನೀಡಿದ್ದಾರೆ. ಇದಷ್ಟೇ ಅಲ್ಲದೇ ಇಡೀ ಜಿಲ್ಲೆಯಾದ್ಯಂತ ನಕಲಿ ಕ್ಲಿನಿಕ್​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಾ. ಮಹೇಶ ಕೋಣಿ ಮಾಹಿತಿ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ