Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸ* 

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. 

ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು.

ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಸುಳೇಭಾವಿಯಲ್ಲಿ ನೂತನ ‘ಬನಶ್ರೀ ಭವನ’ ಉದ್ಘಾಟನೆ; ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲ*ಶೀತಲ ಕುಂಬಾರ ಅವರಿಗೆ “ಹೆಮ್ಮೆಯ ಕರ್ನಾಟಕ ರತ್ನ” ಪ್ರಶಸ್ತಿ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಜ್ಯೋತಿ ಮಾಳಿಗೆ ಪ್ರಥಮ ಬಹುಮಾನಭಾರತೀಯ ಪರಂಪರೆ ಸಂಪ್ರದಾಯ ಉಳಿಸಿ ಬೆಳೆಸಬೇಕು - ಕಾಶಿ ಶ್ರೀಸತೀಶ್ ಪ್ರತಿಭಾ ಪುರಸ್ಕಾರದಲ್ಲಿ ಸಂಕೇಶ್ವರ ಕನ್ಯಾ ಶಾಲೆಗೆ ಪ್ರಥಮ ಸ್ಥಾನ: ₹50,000 ನಗದು ಬಹುಮಾನ ವಾಯುಮಾಲಿನ್ಯ  ನಿಯಂತ್ರಣ ಮಾಸಾಚರಣೆ :  25 ರಂದು ಅಥಣಿ ಪಟ್ಟಣದಲ್ಲಿ  ಜನ ಜಾಗೃತಿ ಕಾರ್ಯಕ್ರಮ   ಲಿಂಗಾಯತ ಪಂಚಮಸಾಲಿ ಅಭಿವೃದ್ಧಿ ಸೇವಾ ಸಂಘದಿಂದ  ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ/ ಸಚಿವ ಲಕ್ಷ್ಮಣ ಸವದಿ ಸಲಹೆ ಜಗಜ್ಯೋತಿ ಬಸವಣ್ಣನವರ ಅವಹೇಳನ ಸಹಿಸುವ ಪ್ರಶ್ನೆಯೇ ಇಲ್ಲ : ಸಿದ್ದನಗೌಡರ ಡಿಸೆಂಬರ್  ೧೨ಕ್ಕೆ  ಘಟಪ್ರಭಾದಲ್ಲಿ ತಾಲೂಕು ಮಟ್ಟದ ಕಸಾಪ ಸಮ್ಮೇಳನಕಾಂಗ್ರೆಸ್ ಸರಕಾರ ರಾಜ್ಯದ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ"