ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಹರ್ಯಾಣ ಮೂಲದ ಆರೋಪಿ ಬಂಧನ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.