Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಧರ್ಮ ಪುನರುಜ್ಜೀವನಗೊಳಿಸಿದ ಆಧ್ಯಾತ್ಮ ಆದಿ ಶಂಕರಾಚಾರ್ಯರು

ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಅಭಿಮತ



ಬಳ್ಳಾರಿ,ಏ.21
ಹಿಂದೂ ಧರ್ಮ ಪುನರುಜ್ಜೀವನಗೊಳಿಸಿದ ಆಧ್ಯಾತ್ಮ ಆದಿ ಶಂಕರಾಚಾರ್ಯರು. ಸಮಾಜವನ್ನು ಸುಸ್ಥಿತಿಗೆ ಕೊಂಡೊಯ್ಯುವಲ್ಲಿ ಆದಿ ಶಂಕರಾಚಾರ್ಯರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ  ನಗರದ ಸಂಗನಕಲ್ಲು ರಸ್ತೆಯ ಭಾರತಿ ತೀರ್ಥ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಮಠಗಳನ್ನು (ದಕ್ಷಿಣದಲ್ಲಿ ಶೃಂಗೇರಿ, ಪಶ್ಚಿಮದಲ್ಲಿ ದ್ವಾರಕಾ, ಪೂರ್ವದಲ್ಲಿ ಪುರಿ ಜಗನ್ನಾಥ ಮತ್ತು ಉತ್ತರದಲ್ಲಿ ಬದರಿನಾಥ) ಸ್ಥಾಪಿಸುವ ಮೂಲಕ ವೇದಾಂತದ ಪುನರುಜ್ಜೀವನ ಮತ್ತು ಹಿಂದೂ ಧರ್ಮದ ಏಕತೆಯನ್ನು ಬಲಪಡಿಸಿದವರು ಎಂದು ತಿಳಿಸಿದರು.
2018 ರಲ್ಲಿ ಸ್ಥಾಪನೆಯಾದ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 2025-26 ನೇ ಸಾಲಿನಲ್ಲಿ ರಾಜ್ಯ ಸರ್ಕಾರ 60 ಕೋಟಿ ರೂ. ಅನುದಾನ ನೀಡಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 20 ರಿಂದ 30 ಕೋಟಿ ರೂ. ಮೀಸಲಿಡಲಾಗಿದ್ದು, ಇದರಲ್ಲಿ ಶೇ. 50 ರಷ್ಟು ಸಬ್ಸಿಡಿ ದೊರೆಯಲಿದೆ. ಬಡ ಬ್ರಾಹ್ಮಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ರಿಂದ 15 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ತುರ್ತು ವೈದ್ಯಕೀಯ ನೆರವಿಗೆ 3 ರಿಂದ 5 ಕೋಟಿ ರೂ. ಹಾಗೂ ಮಹಿಳಾ ಉದ್ಯಮಿಗಳಿಗೆ ನೆರವಾಗಲು 5 ರಿಂದ 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಮಾನವನಲ್ಲಿ ದೇವರನ್ನು ಕಾಣುವುದೇ ಕಷ್ಟವಿರುವ ಕಾಲದಲ್ಲಿ, ಪ್ರತಿಯೊಬ್ಬ ವ್ಯಕ್ತಿಯ ಆತ್ಮದಲ್ಲೂ ಪರಮಾತ್ಮನಿದ್ದಾನೆ ಎಂದು ಸಾರಿದ ಆದಿ ಶಂಕರಾಚಾರ್ಯರ ಅದ್ವೆöÊತ ಸಿದ್ಧಾಂತ ಜಗತ್ತಿಗೆ ಶ್ರೇಷ್ಠ ಕೊಡುಗೆಯಾಗಿದೆ ಎಂದು ಹೇಳಿದರು.
ಮನುಷ್ಯ ಬದುಕಿರುವಾಗಲೇ ಸತ್ಸಂಗ ಮತ್ತು ನಿಸ್ಸಂಗದ ಮೂಲಕ ಮೋಹವನ್ನು ತೊರೆದು ಜೀವನ ಮುಕ್ತಿಯನ್ನು ಪಡೆಯಬಹುದು ಎಂದು ಎಂಟನೇ ಶತಮಾನದಲ್ಲೇ ಸಾರಿದ ಮಹಾನ್ ವ್ಯಕ್ತಿ ಶಂಕರಾಚಾರ್ಯರು. ಕರ್ನಾಟಕದ ಶೃಂಗೇರಿಯಲ್ಲಿ ಶಾರದಾ ಪೀಠವನ್ನು ಸ್ಥಾಪಿಸುವ ಮೂಲಕ ಅಧ್ಯಾತ್ಮದ ತಳಹದಿಯನ್ನು ಬಲಪಡಿಸಿದರು. ಬ್ರಾಹ್ಮಣ ಸಮುದಾಯವು ನಾಡು-ನುಡಿ ಮತ್ತು ದೇಶ ಕಟ್ಟುವಲ್ಲಿ ಅಪಾರ ಕೊಡುಗೆ ನೀಡಿದೆ ಎಂದು ಅವರು ಶ್ಲಾಘಿಸಿದರು.
ಸರ್ ಎಂ.ವಿಶ್ವೇಶ್ವರಯ್ಯನವರು ತುಂಗಭದ್ರಾ ಅಣೆಕಟ್ಟು ಕಟ್ಟಿದರೆ, ಬ್ರಾಹ್ಮಣ ಸಮುದಾಯದ ಮೇಧಾವಿ ಇಂಜಿನಿಯರ್ ತಿರುಮಲೆ ಅಯ್ಯಂಗಾರ್ ಅವರು ಸ್ವಾತಂತ್ರö್ಯ ಬಂದ ಕೇವಲ ಮೂರು ವರ್ಷಗಳಲ್ಲಿ ಆ ಬೃಹತ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸಿ ಈ ಭಾಗದ ಜನರಿಗೆ ನೀರಾವರಿ ಸೌಲಭ್ಯ ಕಲ್ಪಿಸಿದರು. ಸಮಾಜಕ್ಕೆ ಉತ್ತಮ ಸಂಸ್ಕಾರ ಕಲಿಸುವಲ್ಲಿ ಮತ್ತು ಭಾರತವನ್ನು ಶಕ್ತಿಯುತ ರಾಷ್ಟçವನ್ನಾಗಿ ಮಾಡುವಲ್ಲಿ ಈ ಸಮುದಾಯ ಯಾವಾಗಲೂ ಮುಂಚೂಣಿಯಲ್ಲಿದೆ.
ಕಾAಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡನೇ ವರ್ಷ ಶಂಕರಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಸಿದ್ದರಾಮಯ್ಯನವರ ಸರ್ಕಾರ ಎಲ್ಲಾ ಧರ್ಮ ಮತ್ತು ಜಾತಿಗಳನ್ನು ಸಮಾನವಾಗಿ ಪ್ರೀತಿಸುತ್ತದೆ ಎಂಬುದಕ್ಕೆ ಇಂತಹ ಜಯಂತಿಗಳ ಆಚರಣೆಯೇ ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟರು.
ಬಳ್ಳಾರಿಯ ರಾಮಕೃಷ್ಣ ಆಶ್ರಮದ ಪೂಜ್ಯಶ್ರೀ ಸ್ವಾಮಿ ಮಂಗಳನಾಥಾನAದಜಿ ಮಹಾರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಕ್ರಿಸ್ತ ಶಕ 788 ರ ಸುಮಾರಿಗೆ ಕೇರಳದ ಕಾಲಡಿಯಲ್ಲಿ ಶಿವಗುರು ಮತ್ತು ಆರ್ಯಾಂಬ ದಂಪತಿಗಳ ಪುತ್ರರಾಗಿ ಜನಿಸಿದ ಶಂಕರಾಚಾರ್ಯರು, ಬಾಲ್ಯದಲ್ಲೇ ಮೇಧಾವಿಗಳಾಗಿದ್ದರು. ಎಂಟನೇ ವಯಸ್ಸಿಗೆ ವೇದಗಳನ್ನು ಅಭ್ಯಾಸ ಮಾಡಿ ತಾಯಿಯ ಅನುಮತಿಯೊಂದಿಗೆ ಸನ್ಯಾಸ ಸ್ವೀಕರಿಸಿದರು. ಭಜಗೋವಿಂದA, ವಿವೇಕ ಚೂಡಾಮಣಿ ಸೇರಿದಂತೆ ಉಪನಿಷತ್ತುಗಳು, ಬ್ರಹ್ಮಸೂತ್ರ ಮತ್ತು ಭಗವದ್ಗೀತೆಯ ಮೇಲೆ ಭಾಷ್ಯಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮುದಾಯದವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಬಳ್ಳಾರಿಯ ಕೆ.ಶಾಂತಶಾಸ್ತಿç ತಂಡದಿAದ ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.
ಈ ವೇಳೆ ಬಳ್ಳಾರಿಯ ಸಭಾಪತಿ ಬೀದಿಯ ಶ್ರೀ ಶೃಂಗೇರಿ ಶಂಕರಮಠದ ಮಠಾಧಿಕಾರಿ ಕೆ.ರವಿಶಾಸ್ತಿç, ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವ ಪುಸ್ತಕ ದಿನ  ಮತ್ತು ಕನ್ನಡ ಪುಸ್ತಕೋದ್ಯಮಧಾರವಾಡದ ಎ ಜಿ ಎಂ ಆರ್ ಸಿ ಇ ಟಿ ಕಾಲೇಜಿಗೆ ‘ಟಿಸಿಎಸ್ ಟೆಕ್ ಬೈಟ್ಸ್’ ಹುಬ್ಬಳ್ಳಿ ವಲಯ ಮಟ್ಟದ ಪ್ರಶಸ್ತಿಅಶಿಸ್ತು ಮುಂದುವರೆಸಿದರೆ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕ್ರಮ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಎಚ್ಚರಿಕೆಪ್ರಾಣೇಶರಿಂದ ನಗೆಹಬ್ಬ ಕಾರ್ಯಕ್ರಮಬಿ-ಖಾತಾ ಮಾಲೀಕರಿಗೆ ತೊಂದರೆ, ಜಿಲ್ಲಾ ಪ್ರಜಾ ಜಾಗೃತಿ ವೇದಿಕೆ ಮುಖ್ಯ ಎಫ್.ಐ.ಡಿ ರದ್ದು  ಹಾಗು   ರಸಗೊಬ್ಬರಗಳ ಬೆಲೆ ಏರಿಕೆ  ಹಾಗೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಜೆಸಿಬಿ ಬಳಸಿ ಹಳೆಯ ಮಳಿಗೆ ಗಳು ನೆಲಸಮಮಹಿಳಾ ಅಧಿಕಾರಿಗೆ  ಕಿರುಕುಳ ,ಕಛೇರಿ ಅಧೀಕ್ಷಕನ ವಿರುಧ್ಧ   ಮೇಲಧಿಕಾರಿಗಳಿಗೆ  ದೂರು :ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬಣ್ಣನೆಬೆಳಗಾವಿಯಲ್ಲಿ ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ರೆಡ್ಡಿ ಸಂಘದಿಂದ ಭೂಮಿ ಹಸ್ತಾಂತರ.