Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಯೋಜನೆಯ ನಿಸ್ವಾರ್ಥ ಸೇವೆ ಶ್ಲಾಘನೀಯ: ಅಭಯಕುಮಾರ ಅಕಿವಾಟೆ

ಶಿರಗುಪ್ಪಿಯಲ್ಲಿ ಮದ್ಯವರ್ಜನ ಶಿಬಿರ ಸಂಪನ್ನ
ಕಾಗವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ. ವೀರೇಂದ್ರ ಹೆಗ್ಗಡೆ ದಂಪತಿಗಳು ಮಾಡುತ್ತಿರುವ ನಿಸ್ವಾರ್ಥ ಸೇವೆಗಳಿಂದ ಇಂದು ಬೀದಿಗೆ ಬರಬೇಕಾಗಿದ್ದ ಸಾಕಷ್ಟು ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತೀವೆ. ಯಾವುದೇ ಫಲಾಪೆಕ್ಷೆ ಇಲ್ಲದೇ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವ ಅವರ ಸಂಕಲ್ಪವನ್ನು ನಿವೇಲ್ಲರೂ ಈಡೇರಿಸಬೇಕಾಗಿದೆ ಎಂದು ಶಿರಗುಪ್ಪಿ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಭಯಕುಮಾರ ಅಕಿವಾಟೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು.


ಅವರು, ಶನಿವಾರ ದಿ. ೨೯ ರಂದು ತಾಲೂಕಿನ ಶಿರಗುಪ್ಪಿ ಗ್ರಾಮದ ನರಸೋಬಾ ದೇವಸ್ಥಾನದ ಸಭಾ ಭವನದಲ್ಲಿ ಶಿರಗುಪ್ಪಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಾ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಅಥಣಿ, ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಕಾಗವಾಡ ಪೋಲಿಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಶಿರಗುಪ್ಪಿ ಗ್ರಾಮ ಪಂಚಾಯತಿ, ತಾಲೂಕಾ ಪತ್ರಕರ್ತರ ಸಂಘ, ಶಿರಗುಪ್ಪಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ತಾಲೂಕಾ ನವಜೀವನ ಸಮಿತಿ, ಸ್ಥಳೀಯ ಸಂಘ-ಸAಸ್ಥೆಗಳ ಸಹಯೋಗದಲ್ಲಿ ದಿ. ೨೨ ರಿಂದ ಪ್ರಾರಂಭಗೊAಡ ೮ ದಿನಗಳ ೨೦೧೪ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಿದ್ದರು.


ಸುಮಾರು ೫೦ ಮಧ್ಯವ್ಯಸನಿಗಳು ಶಿಬಿರದಲ್ಲಿ ಭಾಗವಹಿಸಿ, ಮದ್ಯ ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಿ, ಮುಂದಯೂ ಮದ್ಯೆ ಸೇವನೆ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿದರು.


ಈ ವೇಳೆ ಕರ್ನಾಟಕ ಜೈನ್ ಅಸೋಶಿಯೆಶನ್‌ನ ರಾಜ್ಯ ಉಪಾಧ್ಯಕ್ಷ ಶೀತಲ ಪಾಟೀಲ, ಮುಖಂಡರಾದ ಮಹಾವೀರ ಕಾತ್ರಾಳೆ, ಅಮರ ದುರ್ಗಣ್ಣವರ, ಭಮಣ್ಣಾ ಚೌಗುಲೆ, ಸುಭಾಷ ಪಾಟೀಲ, ಸಂಜಯ ನಾಡಗೌಡಾ, ರಾಜೇಂದ್ರ ಚೌಗುಲೆ, ಅಮೀನ ಶೇಖ, ಸದಾಶಿವ ಪೂಜಾರಿ, ಜಿನೇಂದ್ರ ಖೇಮಲಾಪೂರೆ, ಯೋಜನೆಯ ಜಿಲ್ಲಾ ನಿರ್ದೇಶಕಿ ನಾಗರತ್ನಾ ಹೆಗಡೆ, ಯೋಜನಾಧಿಕಾರಿ ಸಂಜೀವ ಮರಾಠೆ, ಮೇಲ್ವಿಚಾರಕಿ ಚನ್ನಮ್ಮಾ ಸುತಗಟ್ಟಿ, ಶಿಬಿರದ ಉಸ್ತುವಾರಿಗಳಾದ ಭಾಸ್ಕರ್ ಎನ್., ಕುಮಾರ ಟಿ., ಸೇರಿದಂತೆ ಅನೇಕ ಗಣ್ಯರು, ಧರ್ಮಸ್ಥಳ ಯೋಜನೆಯ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*