Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಜ್ಯೋತಿರಾವ್ ಪುಲೆ ಅವರ ಜೀವನ  ವ್ಯಕ್ತಿತ್ವ ಅಳವಡಿಸಿಕೊಳ್ಳಿ"

ಬಳ್ಳಾರಿ,ಮೇ21. ಮಹಾನ್ ಮಾನವತಾವಾದಿ ಜ್ಯೋತಿರಾವ್ ಫುಲೆ ಅವರ ೨೦೦ ನೇಜನ ವಾರ್ಷಿಕೋತ್ಸ ವಸಂದರ್ಭದಲ್ಲಿ ಎಐಡಿಎಸ್‌ಓವತಿಯಿಂದ ಅಮರಾಪುರ  ಗ್ರಾಮದಲ್ಲಿ ಮಕ್ಕಳ ಶಿಬಿರ ಸಂಘಟಿಸಲಾಗಿತ್ತು.
ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಮುಖಂಡರು ಹಾಗೂ ಹೋರಾಟಗಾರರಾದ ವಿದ್ಯಾ  ಅವರು, ಇಂದಿನ ಸಾಮಾಜಿಕ ವಾತಾವರಣ ಮೌಲ್ಯಗಳಿಲ್ಲದೆ ಕೊಳೆತು ಹೋಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ನಮ್ಮದೇ ದೇಶದಲ್ಲಿ ನಿಸ್ವಾರ್ಥವಾಗಿ ದೇಶಕ್ಕಾಗಿ ಜೀವ ಕೊಟ್ಟ ಮಹಾನ್ ವ್ಯಕ್ತಿಗಳ ವಿಚಾರಗಳನ್ನು ತಿಳಿಸದೆ ಬರೀ  ಮಾರ್ಕ್ಸ್ ಕಾರ್ಡ್ಗಳಲ್ಲಿ ಬರುವ ಅಂಕಿಗಳ ಹಿಂದೆ ಬಿದ್ದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಆದ್ದ-ರಿಂದ ಮಕ್ಕಳೆಲ್ಲರೂ ಮಹಾನ್ ವ್ಯಕ್ತಿಗಳ ಹೋರಾಟದ ಬದುಕು ಮತ್ತು ಅವರು ಪಾಲಿಸಿದ ನೈತಿಕತೆ ಪರಿಚಯಿಸುವುದರಿಂದ ಮಾತ್ರ ನಿಮ್ಮಲ್ಲಿ ಸದೃಢ ವ್ಯಕ್ತಿತ್ವರೂಪಿಸಲು ಸಾಧ್ಯ, ಎಂದು ಹೇಳಿದರು.
ಶಿಬಿರದ ಮೊದಲ ಗೋಷ್ಠಿಯಲ್ಲಿ ಜ್ಯೋತಿಬಾ ಫುಲೆ ಅವರ ಜೀವನ ಕಥೆಯನ್ನು ಹೇಳುತ್ತಾ, ಅಂದು ಪುಲೆ ಅವರು ಸಾಮಾಜಿಕ ಸಂಪ್ರದಾಯದ ವಿರೋಧದ ಮಧ್ಯೆ ಹೆಣ್ಣು ಮಕ್ಕಳಿಗಾಗಿವಮತ್ತು ದಲಿತ ದಮನಿತ ಮಕ್ಕಳಿಗಾಗಿ ಶಾಲೆಯನ್ನು ತೆರೆಯದಿದ್ದರೆ, ಇಂದು ನಾವ್ಯಾರೂ ಈ ಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಮತ್ತು ಸಮಾನವಾಗಿ ಸಿಗಬೇಕು ಎಂಬುದು ಅವರ ಆಶಯವಾಗಿತ್ತು, ಎಂದು ತಿಳಿಸಿದರು.
ಇಂದಿನ ಶಿಕ್ಷಣ ವ್ಯವಸ್ಥೆಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಒಂದೆಡೆ ಸರ್ಕಾರಗಳು ಇಂದು ಶಿಕ್ಷಣವನ್ನು ವ್ಯಾಪಾರೀಕರಣ ಮಾಡುತ್ತಿವೆ. *ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸಾವಿರಾರು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲಾಗುತ್ತಿದೆ. ಇದು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಸಂಚು ಎಂದು ಹೇಳಿದರು.
ಶಿಬಿರದಲ್ಲಿ ಮನೋರಂಜನೆ ಆಟಗಳು, ಹಾಡುಗಳುಹಾಗೂ ಕ್ರಿಕೆಟ್ ಮತ್ತು ಇನ್ನಿತರ ಕ್ರೀಡೆಗಳು ಕೆಲವು ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಗ್ರಾಮದ ಮುಖಂಡರು ಮತ್ತು ಸಾರ್ವಜನಿಕ ಶಿಕ್ಷಣ ಸಮಿತಿಯ ನಾಗರಾಜ,ಬಸವರಾಜ, ಪಾರ್ವತಿ, ನಾಗಮ್ಮ, ಲಕ್ಷಿö್ಮ, ಸುಂಕಪ್ಪ, ಎಐಡಿಎಸ್‌ಒ ಜಿಲ್ಲಾ ಕಾರ್ಯದಲ್ಲಿ ಮಂಜುನಾಥ ಮತ್ತು ಊರಿನ ಮಕ್ಕಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ