Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಳತೆಗೆ ತಕ್ಕ ಹಾಗೆ ಪಡಗಳನ್ನು ಕಡೆಯಲು ಸೂಚನೆ : ಎಡಿಪಿಸಿ ಕಿರಣಕುಮಾರ ಎಸ್.ಎಚ್

ಗದಗ,ಏಪ್ರಿಲ್​ 08: ಮನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದ್ದು, ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿವಸ ಕೂಲಿ ಕೆಲಸವನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ ಈ ಹಿನ್ನೆಲೆ ಅಳತೆಗೆ ತಕ್ಕ ಹಾಕೆ ಪಡ ಕಡೆಯುವದು, ಕಡಿಸುವದು ನಿಮ್ಮ ಕರ್ತವ್ಯ ಅಂತಾ ಜಿಲ್ಲಾ ಪಂಚಾಯತ ಎಡಿಪಿಸಿ ಕಿರಣಕುಮಾರ ಸೂಚನೆ ನೀಡಿದರು..

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದ ಮನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಜಿಲ್ಲೆಯ ಎಲ್ಲೆಡೆ ಆಯುಕ್ತಾಲಯದ ನಿರ್ದೇಶನ ದಂತೆ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  " ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ" ಅಭಿಯಾನ  ಹಮ್ಮಿಕೊಂಡಿದ್ದು ಮೇ ಅಂತ್ಯದವರೆಗೆ ಅಭಿಯಾನ ಇರುತ್ತದೆ. ನಿಮ್ಮ ಗ್ರಾಮದ ಜನರು ಇದರ ಸದುಪಯೋಗ ಪಡಿಸಿಕೊಳ್ಳಲು ಹೇಳಿದರು

ಅಲ್ಲದೆ ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಗ್ರಾಮ ಪಂಚಾಯತಿ ಮಾಡಿದೆ. ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆ ತರಬಾರದು ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿ ಯಿಂದ ಕೂಸಿನ ಮನೆ ಆರಂಭಮಾಡಿದ್ದು,ತಾವುಗಳು ತಮ್ಮ ಮಕ್ಕಳನ್ನು ಅಲ್ಲಿ0iÉುೀ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದ್ದು ಇದರಿಂದ ಪಾಲಕರಿಬ್ಬರು ಯೋಜನೆಯಡಿ ಕೆಲಸಕ್ಕೆ ತೆರಳಿದಾಗ ಮಕ್ಕಳ ಲಾಲನೆ ಪಾಲನೆ  ಕೊರತೆ ನೀಗಿದಂತಾಗಿದೆ ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು ಪ್ರತಿಯೊಬ್ಬರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಮತದಾನ ಜಾಗೃತಿ : ದೇಶದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವದನ್ನು ಮರೆಯಬೇಡಿ ಕಡ್ಡಾಯವಾಗಿ ಮತದಾನ ಮಾಡಿ ಮತದಾನ ನಿಮ್ಮ ಹಕ್ಕು ಹೌದು, ಕರ್ತವ್ಯವು ಆಗಿದೆ ಈ ಹಿನ್ನೆಲೆ ಕಡ್ಡಾಯವಾಗಿ ಮತದಾನ ಮಾಡಿ ಅಂತಾ ಕೂಲಿ ಕಾರ್ಮಿಕರಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು..

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಪ್ರಕಾಶ, ತಾಂತ್ರಿಕ ಸಹಾಯಕ ಪ್ರದೀಪ ನರೆಗಲ್ ,ಗ್ರಾಮ ಕಾಯಕ ಮಿತ್ರ,ನರೇಗಾ ಕೂಲಿ ಕಾರ್ಮಿಕರು,ಮೇಟಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ