Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣ್ಣು ಪರೀಕ್ಷೆ ಮಾಡಿದ ಕೃಷಿ ವಿಜ್ಞಾನಿಗಳು




ಬಳ್ಳಾರಿ: 06..ತಾಲೂಕಿನ ಶಿಡಿಗಿನಮೊಳ ಗ್ರಾಮದ ಬಳಿ ಇರುವ ಕೈಗಾರಿಕೆಯಿಂದಾಗಿ ಸುತ್ತ ಮುತ್ತಲ ಗ್ರಾಮಗಳ ಮಣ್ಣಿನ ಫಲವತ್ತತೆ ಕ್ಷೀಣಿಸಿ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ಆರೋಪಿಸಿರುವ ಹಿನ್ನೆಲೆಯಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಮಣ್ಣಿನ ಫಲವತ್ತತೆ ಪರೀಕ್ಷಿಸಿದರು.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಚೆನ್ನ ದಾಸರ, ಹೊಲೆಯ ದಾಸರ, ಮಾಲಾ ದಾಸರ ಜನ ಸೇವಾ ಸಮಿತಿ ಬೆಂಗಳೂರು ಮತ್ತು ಜಿಲ್ಲಾ ರೈತ ಹಾಗೂ ಗ್ರಾಮಾಭಿವೃದ್ಧಿ ಮತ್ತು ಪರಿಸರ ರಕ್ಷಣಾ ಸಮಿತಿ ಪದಾಧಿಕಾರಿಗಳು ಇತ್ತೀಚೆಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕೈಗಾರಿಕೆಯಿಂದ ಶಿಡಿಗಿನಮೊಳ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರ ಬವಣೆಗಳ ಕುರಿತು ನಿವೇದಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿಗಳ ತಂಡವು ಇಂದು ಶಿಡಿಗಿನಮೊಳ ಗ್ರಾಮಕ್ಕೆ ಆಗಮಿಸಿ ರೈತರ ಅಹವಾಲುಗಳನ್ನು ಆಲಿಸಿದರು.

ಬಳಿಕ ಕಾರೇಕಲ್ಲು,  ಬ್ಯಾಲಚಿಂತೆ, ಕೆ.ವೀರಾಪುರ ಮತ್ತು ಮೀನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ತೊಗರಿ, ಜೋಳ, ಕಡಲೆ ಮತ್ತು ಮಣ್ಣಿನ ಮಾದರಿಗಳನ್ನು ಪಡೆದರು. ಕೃಷಿ ವಿಜ್ಞಾನಿಗಳ ತಂಡದ ಮುಖ್ಯಸ್ಥರಾದ ಡಾ.ಜಿ. ಗಿರೀಶ್, ಸದಸ್ಯರುಗಳಾದ ಡಾ,ಕೃಷಮೂರ್ತಿ, ಡಾ.ಚಂದ್ರ ನಾಯ್ಕ, ಡಾ. ರವಿ ಎಸ್, ಡಾ.ಪಾಲಯ್ಯ, ಡಾ. ಬಸವರಾಜ ಮತ್ತು ಅಧಿಕಾರಿಗಳಾದ ರೇಖಾ, ಮಾರುತಿ ಪ್ರಸಾದ್, ಶಿವಪ್ಪ ಇನ್ನಿತರರು ತಂಡದಲ್ಲಿ ಇದ್ದರು.

ವಿಜ್ಞಾನಿಗಳೊಂದಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಚೆನ್ನ ದಾಸರ, ಹೊಲೆಯ ದಾಸರ, ಮಾಲಾ ದಾಸರ ಜನ ಸೇವಾ ಸಮಿತಿ ಬೆಂಗಳೂರು ಮತ್ತು ಜಿಲ್ಲಾ ರೈತ ಹಾಗೂ ಗ್ರಾಮಾಭಿವೃದ್ಧಿ ಮತ್ತು ಪರಿಸರ ರಕ್ಷಣ ಸಮಿತಿಯ ಉಭಯ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಗ್ರಾಮಗಳ ರೈತರು, ಮುಖಂಡರು, ಸಮಾಜ ಸೇವಕರು ಈ ಸಂದರ್ಭದಲ್ಲಿ ಇದ್ದರು.-







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ