Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.


ರಾಜೀನಾಮೆ ಪತ್ರದಲ್ಲೇನಿದೆ: ''ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ, ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ, ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ'' ಎಂದು ಶಿವಾನಂದ ಪಾಟೀಲ್ ಸ್ಪೀಕರ್ ಅವರನ್ನು ಕೋರಿದ್ದಾರೆ.




ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿವಾನಂದ ಪಾಟೀಲ್, ''ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನಿಂದನೆ ಮಾಡಿದ್ದರು. ನನ್ನ ಪೂರ್ವಜರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಾರೆ. ಇಂತಹ ಮಾತುಗಳನ್ನು ಸಹಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ಸ್ಪೀಕರ್​​ಗೆ ರಾಜೀನಾಮೆ ಕೊಟ್ಟು ಬಂದಿದ್ದೇನೆ'' ಎಂದು ಹೇಳಿದರು.


''ಯತ್ನಾಳ್ ಸವಾಲನ್ನು ಸ್ವೀಕರಿಸಿದ್ದೇನೆ. ಯತ್ನಾಳ್ ಅವರು ರಾಜೀನಾಮೆ ನೀಡಲಿ, ನಾನು ವಿಜಯಪುರದಲ್ಲಿ ಚುನಾವಣೆ ಎದುರಿಸುತ್ತೇನೆ. ಇಲ್ಲವೇ, ನೀವು (ಯತ್ನಾಳ್) ಬಸವನಬಾಗೇವಾಡಿಗೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಿ'' ಎಂದು ಸವಾಲು ಹಾಕಿದರು.







''ನಾನು ಬಸವನಬಾಗೇಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದೇನೆ. ನೀವು ರಾಜೀನಾಮೆ ನೀಡಿ ಎಂದು ಅವರು ಶುಕ್ರವಾರದವರೆಗೆ ನನಗೆ ಗಡುವು ಕೊಟ್ಟಿದ್ದರು. ಅದರಂತೆ ನಾನು ಸ್ಪೀಕರ್​​ಗೆ ರಾಜೀನಾಮೆ ನೀಡಿದ್ದೇನೆ. ಯತ್ನಾಳ್ ಅವರಿಗಿಂತ ಮುಂಚೆಯೇ ನನ್ನ ರಾಜೀನಾಮೆ ‌ಪಡೆಯಲು‌ ಮನವಿ ಮಾಡಿದ್ದೇನೆ'' ಎಂದರು.





''ನಾನು ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಜೊತೆಗೆ ಮಾತನಾಡಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ. ಯತ್ನಾಳ್​​ಗೆ ಯಾವುದೇ ಗಡುವು ನೀಡಲ್ಲ. ಅವರು ರಾಜೀನಾಮೆ ಕೊಟ್ಟರೆ, ನನ್ನ ರಾಜೀನಾಮೆ ಅಂಗೀಕಾರ ಆಗುತ್ತದೆ. ನಾನು ಈ ಬಗ್ಗೆ ಸಿಎಂ ಗಮನಕ್ಕೆ ತರಲ್ಲ'' ಎಂದು ಪ್ರತಿಕ್ರಿಯಿಸಿದರು.




ಸ್ಪೀಕರ್ ಪ್ರತಿಕ್ರಿಯೆ: ''ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರಿಗೆ ಇನ್ನೊಬ್ಬರು ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ. ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ'' ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ''ಸವಾಲು ಹಾಕಿದ್ದವರು ರಾಜೀನಾಮೆ ನೀಡಿದ ಬಳಿಕ ಅಂಗೀಕಾರ ಮಾಡಿ ಅಂದಿದ್ದಾರೆ. ನಾನು ಪರಿಶೀಲನೆ ಮಾಡುತ್ತೇನೆ. ಅವರ ಗೌರವದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ" ಎಂದರು.


''ಈಗ ರಾಜೀನಾಮೆ ಪತ್ರ ನೀಡಿದ್ದಾರೆ. ಮುಂದೆ ನಾವು ಆಲೋಚನೆ ಮಾಡುತ್ತೇವೆ. ಸಂವಿಧಾನ ಪ್ರಕಾರ ಪರಿಶೀಲನೆ ಮಾಡುತ್ತೇವೆ. ಅವರ ವಿಚಾರವನ್ನು ಲಿಖಿತ ರೂಪದಲ್ಲಿ ಈಗ ಕೊಟ್ಟಿದ್ದಾರೆ. ರಾಜೀನಾಮೆ ಕೊಡುವುದು ಅವರ ಹಕ್ಕು. ಇದು ಸರಿ ಇದೇಯಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ನಿರ್ಣಯ ಮಾಡುತ್ತೇವೆ. ಕಾನೂನು ಪ್ರಕಾರ ನಾವು ನಿರ್ಧಾರ ಮಾಡುತ್ತೇವೆ'' ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ