LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಏರ್​ ಇಂಡಿಯಾ ವಿಮಾನ ದುರಂತ: ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ ಕಟ್ಟಡದ ಮೇಲೆ ಏಕಾಏಕಿ ಪತನಗೊಂಡಿದ್ದು, ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, "ಸೀಟ್​ ನಂಬರ್​ 11A ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಾವಿನ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು" ಎಂದು ಹೇಳಿದ್ದಾರೆ.

ಪವಾಡಸದೃಶವಾಗಿ ಬದುಕುಳಿದ ಪ್ರಯಾಣಿಕರನ್ನು ಬ್ರಿಟಿಷ್ ಪ್ರಜೆ ವಿಶ್ವಸ್‌ಕುಮಾರ್ ರಮೇಶ್ ಎಂದು ಗುರುತಿಸಲಾಗಿದೆ. ಮುಖ ಮತ್ತು ಇತರಡೆ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


 ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್