ಅಥಣಿ : ವಾಹನಗಳ ಹೊಗೆ, ಕೈಗಾರಿಕೆಗಳು ಮತ್ತು ಕಸ ಸುಡುವುದರಿಂದ ಉಂಟಾಗುವ ವಾಯುಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬುಧವಾರ 25 ರಂದು ಮುಂಜಾನೆ 9 ಗಂಟೆಗೆ ಸೈಕಲ್ ಜಾಥಾ ಮೂಲಕ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಥಣಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ ಹೇಳಿದರು.
ಅವರು ಸೋಮವಾರ ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಅಥಣಿ ನ್ಯಾಯವಾದಿಗಳ ಸಂಘ, ಭಾರತೀಯ ವೇದಿಕೆಯ ಸಂಘ, ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಜನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 25ರಂದು ಮುಂಜಾನೆ 9 ಗಂಟೆಗೆ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಿಂದ ಆರಂಭವಾಗುವ ಸೈಕಲ್ ಜಾಥಾ ಬಸವೇಶ್ವರ ವೃತ್ತ, ಶಿವಯೋಗಿ ವೃತ್ತ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ. ಪರಿಸರ ಪ್ರೇಮಿಗಳು, ವಿವಿಧ ಸಂಘ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಜಾಥಾ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮೋಟಾರು ವಾಹನ ಹಿರಿಯ ನಿರೀಕ್ಷಕ ಶಿವಾನಂದ ಗುಡೋಡಗಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯ ಸಹಾಯಕ ಸುಮಿತಕುಮಾರ ಉಮರಾಣಿ, ಸಾನ್ವಿ ಮೋಟಾರ್ ವಾಹನ ತರಬೇತಿಯ ಕೇಂದ್ರದ ಪ್ರಾಚಾರ್ಯ ಸಿದ್ದು ಹಂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.