Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆ

ಅಳಗವಾಡಿ, ಜೂನ್ 10: ಕಬ್ಬು ಸಾಗಣೆ ಟ್ರ್ಯಾಕ್ಟರ್ ಮಾಲೀಕರಿಗೆ ಪಾವತಿಸಬೇಕಿರುವ ಸುಮಾರು ₹24 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿರುವುದನ್ನು ಖಂಡಿಸಿ ಅಳಗವಾಡಿಯ ಬೀರೇಶ್ವರ ಸಕ್ಕರೆ ಕಾರ್ಖಾನೆ ಕಚೇರಿಗೆ ಬೀಗ ಜಡಿದು ರೈತರು ಹಾಗೂ ರೈತ ಮುಖಂಡರು ಬುಧವಾರ ತೀವ್ರ ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಉತ್ತರ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಬಾಬುಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಟ್ರ್ಯಾಕ್ಟರ್ ಮಾಲೀಕರು, ರೈತರು ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಕಾರ್ಖಾನೆ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಆಡಳಿತ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ತಿಂಗಳುಗಳಿಂದ ಕಬ್ಬು ಸಾಗಣೆ ಟ್ರ್ಯಾಕ್ಟರ್ ಮಾಲೀಕರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡುವಂತೆ ಕಾರ್ಖಾನೆ ಆಡಳಿತಕ್ಕೆ ಮನವಿ ಸಲ್ಲಿಸಲಾಗುತ್ತಿದೆಯಾದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ರೈತ ಮುಖಂಡರು ಆರೋಪಿಸಿದರು. ಕೂಡಲೇ ಬಾಕಿ ಇರುವ ₹24 ಕೋಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಸಂಜೆ ವೇಳೆಯಲ್ಲಿಯೂ ಮುಂದುವರಿದಿದ್ದು, ರೈತರು ಕಾರ್ಖಾನೆ ಆವರಣದಲ್ಲೇ ಅಹೋರಾತ್ರಿ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕಾರ್ಖಾನೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಪ್ರತಿಭಟನಾಕಾರರನ್ನು ಮನವೊಲಿಸಲು ನಡೆಸಿದ ಪ್ರಯತ್ನಗಳು ಫಲಕಾರಿಯಾಗಲಿಲ್ಲ.
ಇಂದು ಕಾರ್ಖಾನೆಯ ಕೋ-ಜನರೇಷನ್ (ವಿದ್ಯುತ್ ಉತ್ಪಾದನಾ ಘಟಕ) ಮುಂಭಾಗದಲ್ಲೂ ಹೋರಾಟವನ್ನು ತೀವ್ರಗೊಳಿಸಲು ಪ್ರತಿಭಟನಾಕಾರರು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಬಾಕಿ ಹಣ ಪಾವತಿಸುವ ಕುರಿತು ಸ್ಪಷ್ಟ ಭರವಸೆ ಸಿಗುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತರು, ಟ್ರ್ಯಾಕ್ಟರ್ ಮಾಲೀಕರು, ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ