LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ​ಗಳ ಹಂಚಿಕೆ: ಬಿವೈ ವಿಜಯೇಂದ್ರ ಆರೋಪ

ಬೆಂಗಳೂರು, ಜುಲೈ 10: ಮೈಸೂರು ಅಭಿವೃದ್ಧಿ ಪ್ರಾಧಿಕಾರದ  ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನ​ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಡಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೈಸೂರಿನ ಕೆಸರೇ ಗ್ರಾಮದಲ್ಲಿದ್ದ 3.16 ಜಮೀನನ್ನು ಹೊಂದಿದ್ದರು. ಈ ಜಮೀನನ್ನು 2014ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಅವರು ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ 2017ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನು ನೀಡಲು ನಿರ್ಧರಿಸಲಾಯಿತು. 2021ರಲ್ಲಿ ಪ್ರತಿ ಚದರ್​ ಅಡಿಗೆ 9 ಸಾವಿರ ರೂಪಾಯಿ ಬೆಲೆ ಬಾಳುವ 14 ನಿವೇಶಗಳನ್ನು ಅರ್ಹತೆಗೂ ಮೀರಿ ನೀಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಪತ್ನಿ ಅವರಿಗೆ ನೀಡಬೇಕಾಗಿದ್ದಿದ್ದು ಕೇವಲ ಎರಡೇ ನಿವೇಶನ ಎಂದು ತಿಳಿಸಿದರು.

ಇದೇ ವರ್ಷ ಏಪ್ರಿಲ್​ 15 ರಂದು ಓರ್ವ ವ್ಯಕ್ತಿಗೆನೇ 42 ನಿವೇಶನ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶಗಳನ್ನು ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ತಪ್ಪು ಮಾಹಿತಿ ನೀಡಲು ಯತ್ನಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿ ಬಿದ್ದಿದೆ. ಪ್ರತಿ ಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ